ಬೆಂಗಳೂರು:ಜುಲೈ 11 :ವಿಧಾನ ಪರಿಷತ್ ಮಾಜಿ ಸಭಾಪತಿ, ಅಖಿಲ ಭಾರತ ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಎನ್ ತಿಪ್ಪಣ್ಣ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ 5 ಗಂಟೆ ಸುಮಾರಿಗೆ ಬಳ್ಳಾರಿಯ ಗಾಂಧಿನಗರದ ನಿವಾಸದಲ್ಲಿ ತಮ್ಮ 98ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎರಡು ಬಾರಿ ವಿಧಾನ ಪರಿಷತ್ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಜೊತೆಗೆ ಅನುಭವಿ ಹಿರಿಯ ನ್ಯಾಯವಾದಿ, ಸಮಾಜ ಸೇವಕರಾಗಿ ಸಾಕಷ್ಟು ಹೆಸರು ಮಾಡಿದ್ದರು.
ಇಂದು ಬಳ್ಳಾರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಶನಿವಾರ ತಿಪ್ಪಣ್ಣ ಅವರ ಸ್ವಗ್ರಾಮ ಚಿತ್ರದುರ್ಗ ಜಿಲ್ಲೆಯ ತುರುವನೂರು ಗ್ರಾಮದಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.








