Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!

Dhrishya News by Dhrishya News
11/07/2025
in ಸುದ್ದಿಗಳು
0
ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ..!!
0
SHARES
7
VIEWS
Share on FacebookShare on Twitter

ಉಡುಪಿ, 11 ಜುಲೈ 2025: ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯಲ್ಲಿ ಜುಲೈ 14 ರಿಂದ ಜುಲೈ 24, 2025 ರವರೆಗೆ ಬೆಳಿಗ್ಗೆ 9:00 ರಿಂದ ಸಂಜೆ 4:30 ರವರೆಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ. ಈ ಶಿಬಿರದಲ್ಲಿ ಆಸ್ಪತ್ರೆಯ ಎರಡು ವಿಭಾಗಗಳು ಭಾಗಿಯಾಗಿವೆ (ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ; ಹಾಗೂ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ ಮತ್ತು ಜನರಲ್ ಸರ್ಜರಿ) ಹಾಗೂ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ಚಿಕಿತ್ಸೆಯ ಅಗತ್ಯವಿರುವ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಸಹಾಯ ಮಾಡಲು ಸಿದ್ಧವಾಗಿವೆ.

ಸಾಮಾನ್ಯವಾಗಿ ಮಾಡುವ ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಗೆ ಅನೇಕ ಅನುಕೂಲಗಳಿವೆ. ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಯಲ್ಲಿ ಸಣ್ಣ ಗಾಯ ಇರುವುದರಿಂದ, ನೋವು ಕಡಿಮೆಯಿದ್ದು, ಚೇತರಿಕೆ ವೇಗವಾಗುವುದಲ್ಲದೇ ಆಸ್ಪತ್ರೆಯಲ್ಲಿ ಉಳಿದುಕೊಳ್ಳಬೇಕಾದ ಸಮಯವೂ ಕಡಿಮೆಯಾಗುತ್ತದೆ. ಇಂತಹ ಕಾರ್ಯವಿಧಾನವು ನಮ್ಮ ಸಮುದಾಯಲ್ಲಿ ಹಲವರ ಕೈಗೆಟುಕುವಂತೆ ಮಾಡುವುದು ಈ ಕಾರ್ಯಕ್ರಮದ ಗುರಿಯಾಗಿದೆ.

ಕೆಳಹೊಟ್ಟೆಯ ಅಥವಾ ತೊಡೆಸಂದು ನೋವು, ಫೈಬ್ರಾಯ್ಡ್‌ಗಳು, ಅಂಡಾಶಯದ ಸಿಸ್ಟುಗಳು, ಅತಿಯಾದ ಅಥವಾ ಅನಿಯಮಿತ ಮುಟ್ಟಿನ ರಕ್ತಸ್ರಾವ, ಅಥವಾ ಬಂಜೆತನಕ್ಕೆ ಸಂಬಂಧಿಸಿದ ಕಾಳಜಿಗಳಂತಹ ಸ್ತ್ರೀರೋಗ ಸಮಸ್ಯೆಗಳಿರುವ ಮಹಿಳೆಯರು ಲ್ಯಾಪರೊಸ್ಕೋಪಿಕ್ ಕಾರ್ಯವಿಧಾನಗಳಿಂದ ಪ್ರಯೋಜನ ಪಡೆಯಬಹುದು. ಮಹಿಳೆಯರಲ್ಲಿ ಶಾಶ್ವತ ಗರ್ಭನಿರೋಧಕಕ್ಕಾಗಿ ಲ್ಯಾಪರೊಸ್ಕೋಪಿಕ್ ಸಂತಾನಹರಣ ವಿಧಾನಗಳು ಸಹ ಲಭ್ಯವಿರುತ್ತವೆ. ಹರ್ನಿಯಾ, ಪಿತ್ತಕೋಶದ ಕಲ್ಲುಗಳು, ಅಪೆಂಡಿಸೈಟಿಸ್ ಮತ್ತು ಇತರ ಕರುಳಿನ ಅಸ್ವಸ್ಥತೆಗಳಂತಹ ಶಸ್ತ್ರಚಿಕಿತ್ಸಾ ಸಮಸ್ಯೆಗಳಿರುವ ಎಲ್ಲ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆಯಬಹುದು. ಹರ್ನಿಯಾ ಸಾಮಾನ್ಯವಾಗಿ ತೊಡೆಸಂದು ಅಥವಾ ಹೊಟ್ಟೆಯಲ್ಲಿ ಉಬ್ಬಾಗಿ ಕಾಣಿಸಿಕೊಳ್ಳುವುದಲ್ಲದೆ ನಿಂತಾಗ, ತೂಕವನ್ನು ಎತ್ತುವಾಗ ಅಥವಾ ಕೆಮ್ಮುವಾಗ ಹೆಚ್ಚಾಗುತ್ತದೆ.

ಈ ಕಾರ್ಯಕ್ರಮದ ಭಾಗವಾಗಿ ಶಿಬಿರದ ದಿನಗಳಲ್ಲಿ ತಜ್ಞರೊಂದಿಗೆ ಸಮಾಲೋಚನೆ ಉಚಿತವಾಗಿರುತ್ತದೆ. ಅದಲ್ಲದೆ ಹೊರರೋಗಿಯಾಗಿ ಮಾಡುವ ತಪಾಸಣೆಗಳು ಹಾಗೂ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಗಳ ಮೇಲೆ ಆಗಸ್ಟ್ 31, 2025 ರವರೆಗೆ 20% ರಿಯಾಯಿತಿ ದೊರಕುತ್ತದೆ.

ಮೇಲೆ ತಿಳಿಸಿದ ಯಾವುದೇ ರೋಗಲಕ್ಷಣಗಳನ್ನು ಅನುಭವಿಸುತ್ತಿರುವ ಅಥವಾ ಶಸ್ತ್ರಚಿಕಿತ್ಸೆಗೆ ಅವಶ್ಯಕತೆಯಿದ್ದು ಎರಡನೇ ಅಭಿಪ್ರಾಯವನ್ನು ಪರಿಗಣಿಸುತ್ತಿರುವ ಜನರು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಅಥವಾ ಅಪಾಯಿಂಟ್‌ಮೆಂಟ್ ಕಾಯ್ದಿರಿಸಲು, ದಯವಿಟ್ಟು 7338343777 ಅನ್ನು ಸಂಪರ್ಕಿಸಬಹುದು

Previous Post

ಕರವೇ ಪ್ರವೀಣ್ ಶೆಟ್ಟಿ ಬಣದ ಮಹಿಳಾ ಘಟಕದ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಶಾಲಾ ಮಕ್ಕಳಿಗೆ ಕೊಡೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ..!!

Next Post

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

ಅಲೆಯ ಹೊಡೆತಕ್ಕೆ ನಾಡದೋಣಿ ಮಗುಚಿ ಬಿದ್ದು ಮೀನುಗಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಕೋಟ: ₹30 ಲಕ್ಷ ಮೌಲ್ಯದ 320 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

01/08/2026
ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

ಯಕ್ಷಗಾನ ಕಲಾರಂಗದ 101ನೆಯ ಮನೆ ಹಸ್ತಾಂತರ

01/08/2026
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026

Recent News