ಬೆಳ್ತಂಗಡಿ:ಜುಲೈ 11:ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿದ್ದ ವ್ಯಕ್ತಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ನಿಡಿದ್ದಾನೆ
ಹೇಳಿಕೆ ನೀಡಲು ಬಂದ ವ್ಯಕ್ತಿಯನ್ನು ನ್ಯಾಯಾಲಯದಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತರಲಾಗಿದ್ದು ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.
ನ್ಯಾಯಾಲಯ ವ್ಯಕ್ತಿಯನ್ನು ಹೆಚ್ಚಿನ ವಿಚಾರಣೆಗೆ ಪೊಲೀಸರಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ. ಆ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತದೇಹಗಳನ್ನು ಹೂತಿದ್ದೇನೆ ಎಂದ ವ್ಯಕ್ತಿ ಕೋರ್ಟ್ ಗೆ ಹಾಜರು..!!