ಉಡುಪಿ : ಜುಲೈ 11:“ಮನೆ ಮನೆಗೆ ಪೊಲೀಸ್” ಎಂಬ ಪರಿಕಲ್ಪನೆಯ ವಿನೂತನವಾದ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಕಿರಣ್ ಎಸ್. ಗಂಗಣ್ಣನವರ್ ರವರಿಂದ ಹಸಿರು ಬಾವುಟ ತೋರಿಸುವುದರ ಮುಖಾಂತರ ಅಧೀಕೃತವಾಗಿ ಉದ್ಘಾಟಿಸಿ, ಪೊಲೀಸ್ ಸೇವೆ ಪ್ರತಿ ಮನೆಗೆ ತಲುಪಲಿ, ನಿಮ್ಮ ತಂಡಗಳ ಕಾರ್ಯಕ್ಕೆ ಯಶಸ್ವಿಯಾಗಲಿ ಎಂದುಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಹರಿರಾಮ್ ಶಂಕರ್ ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು , ಮತ್ತು ಅಧಿಕಾರಿ ಸಿಬ್ಬಂದಿಯವರು ಹಾಜರಿದ್ದರು.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ “ಮನೆಮನೆಗೆ ಪೊಲೀಸ್” ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರಿಗೆ ಸೈಬರ್ ಅಪರಾಧ ,ಮಾದಕ ವಸ್ತುಗಳ ಬಗ್ಗೆ, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮನೆಯಲ್ಲಿರುವವರ ಹೆಸರು, ಮೊಬೈಲ್ ನಂಬ್ರ ಪಡೆದುಕೊಳ್ಳಲಾಯಿತು. ಸಾರ್ವಜನಿಕರರಿಂದ ಅವರ ದೂರು – ದುಮ್ಮಾನಗಳನ್ನು ಮತ್ತು ಕೋರಿಕೆಗಳನ್ನು ಸ್ವೀಕರಿಸಲಾಯಿತು