ಉಡುಪಿ : ಜುಲೈ 13:ಭಾವಿ ಪರ್ಯಾಯ ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಪರ್ಯಾಯ ಪುತ್ತಿಗೆ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ಕಟ್ಟಿಗೆ ಮುಹೂರ್ತ ಇಂದು ಜುಲೈ 13ರಂದು ನಡೆಯಿತು
ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಉಡುಪಿ ವಿಧಾನಸಭಾ ಕ್ಷೇತ್ರದ ಗೌರವಾನ್ವಿತ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಈ ಬಾರಿಯ ಶೀರೂರು ಮಠದ ಪರ್ಯಾಯ ಮಹೋತ್ಸವವನ್ನು ನಾಡಹಬ್ಬ ಮಾದರಿಯಲ್ಲಿ ಅತ್ಯಂತ ವೈಭವಪೂರ್ಣವಾಗಿ ನಡೆಸಲು ಶ್ರೀ ಕೃಷ್ಣ ಭಕ್ತರ ಸಲಹೆ ಸಹಕಾರ ಕೋರಿದರು.
ಸಮಾರಂಭದಲ್ಲಿ ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಗಂಟಿಹೊಳೆ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ನವೀನ್ ಶೆಟ್ಟಿ ಕುತ್ಯಾರು, ಮಠದ ದಿವಾನರಾದ ಶ್ರೀ ಉದಯ ಕುಮಾರ್ ಸರಳತ್ತಾಯ, ಶ್ರೀಮಠದ ಭಕ್ತರು, ವಿವಿಧ ಕ್ಷೇತ್ರಗಳ ಗಣ್ಯರು ಉಪಸ್ಥಿತರಿದ್ದರು.