Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

SSLC ಫಲಿತಾಂಶ ಪ್ರಕಟ : ಚಿತ್ರದುರ್ಗ ಪ್ರಥಮ, ಮಂಡ್ಯ 2ನೇ ಸ್ಥಾನ..!!

Dhrishya News by Dhrishya News
08/05/2023
in ಕರಾವಳಿ, ರಾಜ್ಯ/ ರಾಷ್ಟ್ರೀಯ, ಸುದ್ದಿಗಳು
0
0
SHARES
135
VIEWS
Share on FacebookShare on Twitter

ಬೆಂಗಳೂರು, ಮೇ 8- ಕಳೆದ ಮಾರ್ಚ್ ಹಾಗೂ ಏಪ್ರಿಲ್‍ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.83.89ರಷ್ಟು ಫಲಿತಾಂಶ ಬಂದಿದೆ.2021-22ನೆ ಸಾಲಿಗೆ ಹೋಲಿಸಿದರೆ ಈ ಬಾರಿ ಫಲಿತಾಂಶದಲ್ಲಿ ಕುಸಿತ ಕಂಡಿದ್ದು, ಕಳೆದ ಬಾರಿ 85.13ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ 1.24ರಷ್ಟು ಇಳಿಕೆಯಾಗಿದೆ.ಜಿಲ್ಲಾವಾರು ಫಲಿತಾಂಶದಲ್ಲಿ ಚಿತ್ರದುರ್ಗ (96.8%) ಮೊದಲ ಸ್ಥಾನದಲ್ಲಿದ್ದರೆ, ಮಂಡ್ಯ (96.74%), ಹಾಸನ (96.68%) ಮೊದಲ ಮೂರು ಸ್ಥಾನದಲ್ಲಿದ್ದರೆ, ಬೀದರ್ (ಶೇ.78.23%) ಕೊನೆಯ ಸ್ಥಾನ ಪಡೆದಿದೆ.

ಎಂದಿನಂತೆ ಈ ಬಾರಿಯೂ ಬಾಲಕಿಯರೇ ಫಲಿತಾಂಶದಲ್ಲಿ ಮೇಲುಗೈ ಸಾಸಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಹಾಜರಾದ 8,35,102 ವಿದ್ಯಾರ್ಥಿಗಳ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಆರ್., ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್‍ಕುಮಾರ್ ಸಿಂಗ್ ಹಾಗೂ ಎಸ್‍ಎಸ್‍ಎಲ್‍ಸಿ ಮಂಡಳಿ ನಿರ್ದೇಶಕ ಗೋಪಾಲ್‍ಕೃಷ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಸಕ್ತ ಸಾಲಿನ ಫಲಿತಾಂಶವನ್ನು ಪ್ರಕಟಿಸಿದರು

ಈ ಬಾರಿ 4,25,968 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 3,41,108 (80.08%) ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಪರೀಕ್ಷೆಗೆ ಹಾಜರಾದ 4,09,134 ವಿದ್ಯಾರ್ಥಿನಿಯರ ಪೈಕಿ 3,59,511 (87.87%) ತೇರ್ಗಡೆಯಾಗಿದ್ದಾರೆ. ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ಈ ಬಾರಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮೇಲುಗೈ ಸಾಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,83,710 ವಿದ್ಯಾರ್ಥಿಗಳ ಪೈಕಿ 4,20,846 (87%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಇನ್ನು ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ 3,51,392 ವಿದ್ಯಾರ್ಥಿಗಳ ಪೈಕಿ 2,79,773 (79.62%) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದರು.ಪ್ರಸಕ್ತ ಸಾಲಿನ ಫಲಿತಾಂಶದಲ್ಲಿ ಸರ್ಕಾರಿ ಶಾಲೆಗಳ ಶೇಕಡಾವಾರು ಫಲಿತಾಂಶ ಏರಿಕೆಯಾಗಿರುವುದು ಈ ಸಾಲಿನ ವಿಶೇಷತೆಯಾಗಿದೆ

5833 ಸರ್ಕಾರಿ ಶಾಲೆಗಳಲ್ಲಿನ ಒಟ್ಟು 3,33,223 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 2,89,035 (86.74%) ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.3622 ಅನುದಾನಿತ ಶಾಲೆಗಳಿಂದ ಒಟ್ಟು 2,05,491 ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಪೈಕಿ 1,75,974 (85.64%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಅನುದಾನ ರಹಿತ 6038 ಶಾಲೆಗಳಿಂದ 2,48,130 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 2,25,533 (90.89%) ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಪ್ರಥಮ ಭಾಷೆ ಕನ್ನಡದಲ್ಲಿ 125ಕ್ಕೆ 125 ಅಂಕಗಳನ್ನು 14,983 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ. ದ್ವಿತೀಯ ಭಾಷೆಯಲ್ಲಿ 100ಕ್ಕೆ 100ರಷ್ಟು 9754, ತೃತೀಯ ಭಾಷೆಯಲ್ಲಿ 100ಕ್ಕೆ ನೂರರಷ್ಟು 16,170, ಗಣಿತದಲ್ಲಿ 100ಕ್ಕೆ 100ರಷ್ಟು 2132, ವಿಜ್ಞಾನದಲ್ಲಿ 100ಕ್ಕೆ 100ರಷ್ಟು 983, ಸಮಾಜ ವಿಜ್ಞಾನದಲ್ಲಿ 100ಕ್ಕೆ 100ರಷ್ಟು 8311 ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.

ಈ ಬಾರಿ ಎ+ ಶ್ರೇಣಿಯಲ್ಲಿ (90 ರಿಂದ 100) 61,003, ಎ ಶ್ರೇಣಿಯಲ್ಲಿ (82-89) 1,47,634, ಬಿ+ ಶ್ರೇಣಿಯಲ್ಲಿ (70 ರಿಂದ 79) 1,75,489, ಬಿ ಶ್ರೇಣಿಯಲ್ಲಿ (60 ರಿಂದ 69) 1,70,296, ಸಿ+ ಶ್ರೇಣಿಯಲ್ಲಿ (50 ರಿಂದ 59) 1,16,819, ಸಿ ಶ್ರೇಣಿಯಲ್ಲಿ (35-49) 19,311 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಈ ಬಾರಿ ಯಾವುದೇ ಸರ್ಕಾರಿ ಶಾಲೆಯಲ್ಲಿ ಶೂನ್ಯ ಫಲಿತಾಂಶ ದಾಖಲಾಗಿಲ್ಲ.

ವಿದ್ಯಾರ್ಥಿಗಳು ಫಲಿತಾಂಶ ನೋಡುವುದು ಹೇಗೆ?
ಮೊದಲು ವಿದ್ಯಾರ್ಥಿಗಳು karresults.nic.in ಅಧಿಕೃತ ವೆಬ್‌ಸೈಟ್‌ ತೆರೆಯಬೇಕು.
ಮುಖಪುಟದಲ್ಲಿ ಕರ್ನಾಟಕ ಎಸ್‌ಎಸ್‌ಎಲ್‌ಸಿ 2023 ಫಲಿತಾಂಶ ಲಿಂಕ್ ಅನ್ನು ಕ್ಲಿಕ್ ಮಾಡಬೇಕು
ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ನೀಡಬೇಕು
ಕೊನೆಯಲ್ಲಿ ಫಲಿತಾಂಶವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

Previous Post

ಕಾರ್ಕಳ ಹೊಸಮರ್ ಜಯಲಕ್ಷ್ಮಿ ಗೇರುಬೀಜ ಕಾರ್ಖಾನೆ ಉದಯ್ ಕುಮಾರ್ ಶೆಟ್ಟಿ ಭೇಟಿ..!!

Next Post

ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರ ಸಭೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಜಾ ವಿಜಯ ಬಹಿರಂಗ ಚುನಾವಣಾ ಪ್ರಚಾರ ಸಭೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ನಾಳೆ (ಜು,25) ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!

ನಾಳೆ (ಆಗಸ್ಟ್ 4) ಉಡುಪಿ ಜಿಲ್ಲೆಯಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

03/08/2026
ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

ಮಾಹೆ ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆ ಮತ್ತು ಪ್ರದರ್ಶನ 2026 ಪ್ರಕಟಣೆ

03/08/2026
ಭಾರತೀಯ ಫ್ಯಾಷನ್ ವೀಕ್‌ನಲ್ಲಿ ಹೌಸ್ ಆಫ್ ಮಸಾಬಾ ಅವರ ವಧು ಪ್ರದರ್ಶನಕ್ಕಾಗಿಯೇ ವಿನ್ಯಾಸಗೊಳಿಸಲಾದ ವಿಶೇಷ ಚಿನ್ನದ, ಸಾಂಪ್ರದಾಯಿಕ ಹಾಗೂ ದೇವಾಲಯ ಶೈಲಿಯ ಕರಕುಶಲ ಆಭರಣಗಳಿಗೆ ವೇದಿಕೆ ಕಲ್ಪಿಸಿಸಿರುವ ಆದಿತ್ಯ ಬಿರ್ಲಾ ಜ್ಯುವೆಲ್ಲರಿ ಪ್ರಾಯೋಜಿತ ಇಂದ್ರಿಯಾ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

ಜನ್ಮಾಷ್ಟಮಿ ವಿಶೇಷ: ಶ್ರೀಕೃಷ್ಣ ಮಠದಲ್ಲಿ ಯಶಸ್ವಿಯಾಗಿ ನಡೆದ ಚಿತ್ರಕಲಾ ಸ್ಪರ್ಧೆ

03/08/2026

Recent News