ಮೈಸೂರು,ಜು.2೦:ಕಬಿನಿ ಜಲಾಶಯ ತುಂಬಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜತೆಗೂಡಿ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಕಳೆದ ವಾರವಷ್ಟೆ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದ ಮುಖ್ಯಮಂತ್ರಿಗಳು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿ ಕಬಿನಿ ಜಲಾಶಯಕ್ಕೂ ಬಾಗಿನ ಸಮರ್ಪಿಸಿ ಗಂಗಾಪೂಜೆ ನೆರವೇರಿಸಿದರು
ಈ ಸಂದರ್ಭದಲ್ಲಿ ಸಚಿವರುಗಳಾದ ಸಚಿವ ಎಚ್.ಸಿ ಮಹದೇವಪ್ಪ, ಶಾಸಕ ಚಿಕ್ಕಮಾದು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಬಾರಿ ಕಾವೇರಿ ಜಲಾಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಕಬಿನಿ ಮತ್ತು ಕೆಆರ್‌ಎಸ್ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದೆ. ಎರಡೂ ಜಲಾಶಯಗಳಿಂದ ನದಿಗೂ ನೀರನ್ನು ಹರಿಯ ಬಿಡಲಾಗುತ್ತಿದೆ.








