ಉಡುಪಿ : ಜುಲೈ 21: ಭಾರತೀಯ ಹವಾಮಾನ ಇಲಾಖೆ / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 1 ವಾರ (ದಿನಾಂಕ:21.07.2025 ರಿಂದ 27.07.2025 ವರೆಗೆ) ಈ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಗಾಳಿ (ಸುಮಾರು 50 KMPH) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆಯೆಂದು ಸೂಚಿಸಿರುತ್ತಾರೆ. ಅರಬ್ಬಿ ಸಮುದ್ರದಲ್ಲಿ ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ.
ಸಾರ್ವಜನಿಕರು/ಪ್ರವಾಸಿಗರು/ಮೀನುಗಾರರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು ಮತ್ತು ಸಾರ್ವಜನಿಕರು/ಮಕ್ಕಳು/ಕಾರ್ಮಿಕರು ಮಳೆ ಗಾಳಿ/ಸಿಡಿಲು ಬೀಳುವ ಸಂದರ್ಭದಲ್ಲಿ ಹೊರಗೆ ತಿರುಗಾಡದೆ, ಸೂಕ್ತ ಕಟ್ಟಡದಲ್ಲಿ ಆಶ್ರಯ ಪಡೆಯುವುದು, ಕೃಷಿಕರು ಮಳೆ/ಸಿಡಿಲಿನಂತಹ ಸಂದರ್ಭದಲ್ಲಿ ಹೊರಗಿನ ಕೃಷಿ ಚಟುವಟಿಕೆಯಿಂದ ದೂರವಿರುವುದು.
ಈ ಸಂದರ್ಭದಲ್ಲಿ ಮಕ್ಕಳು/ಸಾರ್ವಜನಿಕರು ಅಪಾಯಕಾರಿ ಮರ/ವಿದ್ಯುತ್ ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರುವುದು.
ದುರ್ಬಲವಾದ / ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ / ಮರಗಳ ಕೆಳಗೆ ನಿಲ್ಲಬಾರದು. ಕಟ್ಟಡಗಳ ಮೇಲೆ ಮೊದಲೇ ಕತ್ತರಿಸಿ ವಾಸಿಸುವ ಕಟ್ಟಡಗಳನ್ನು ಅಪಾಯಕಾರಿ ರಕ್ಷಿಸಿಕೊಳ್ಳಬೇಕು. ಗೆಲ್ಲು/ರೆಂಬೆ-ಕೊಂಬೆಗಳಿದ್ದಲ್ಲಿ
ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತವಾಗುವ ಸಂಭವ ಹೆಚ್ಚಾಗಿರುತ್ತದೆ ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಮ ಪಂಚಾಯಿತಿ ಸಿಬ್ಬಂಧಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೆ ಉಳಿಯಬಹುದು.
ಮುಂದಿನ 7 ದಿನಗಳಲ್ಲಿ ಹೆಚ್ಚು ಗಾಳಿಯೊಂದಿಗೆ ಮಳೆ ಬರುವುದರಿಂದ ಸಾರ್ವಜನಿಕರು ಹೊರಗೆ ತಿರುಗಾಡದೆ ಸೂಕ್ತ ಕಟ್ಟಡದಲ್ಲಿ ವಾಸಿಸಬೇಕು. ದುರ್ಬಲ ಕಟ್ಟಡದಲ್ಲಿ ವಾಸವಿದ್ದಲ್ಲಿ ಅಥವಾ ಅಗತ್ಯವಿದ್ದಲ್ಲಿ ಮುಂಜಾಗೃತ ಕ್ರಮವಾಗಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಉಳಿಯಬಹುದು.
ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ಗೆ ಅಥವಾ ಆಯಾ ತಾಲೂಕು ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದು.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು/ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು/ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು/ ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸುವುದು.
ಜಿಲ್ಲಾ/ತಾಲೂಕು ಮಟ್ಟದ ಅಧಿಕಾರಿಗಳು, ನಿಯೊಜನೆಗೊಂಡ ನೋಡಲ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಯ ವಿಪತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು ವಿಪತ್ತನ್ನು ನಿಭಾಯಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ








