Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ..!!

Dhrishya News by Dhrishya News
22/07/2025
in मौसम
0
ಕಾರ್ಕಳದಲ್ಲಿ ರಾಮಾಯಣ ಉಪನ್ಯಾಸ ಮಾಲೆ..!!
0
SHARES
35
VIEWS
Share on FacebookShare on Twitter

ಕಾರ್ಕಳ : ಜುಲೈ 22 : ಕೈಕೇಯಿಯ ಮಾತಿನಂತೆ ತಂದೆಯ ವಚನ ಪರಿಪಾಲನೆಗಾಗಿ ಧೃಡವಾದ ನಿರ್ಧಾರ ತೆಗೆದುಕೊಂಡ ರಾಮನು ವನವಾಸಕ್ಕೆ ತೆರಳಲು ಸಿದ್ಧನಾಗುತ್ತಾನೆ. ರಾಮನಿಲ್ಲದ ಅಯೋಧ್ಯೆಯಲ್ಲಿ ನಾನಿರಲಾರೆ. ರಾಮನಿರುವ ಪ್ರದೇಶವೇ ನನಗೆ ಅಯೋಧ್ಯೆ. ನಾನು ಬಯಸಿದ್ದು ರಾಮನನ್ನೇ ವಿನಹಾ ಅಯೋಧ್ಯೆಯನ್ನಲ್ಲ ಎನ್ನುತ್ತಾ ಸೀತೆಯೂ ವನವಾಸ ಕ್ಕೆ ರಾಮನೊಂದಿಗೆ ತೆರಳಲು ಸಿದ್ಧಳಾದಾಗ ರಾಮನ ನೆರಳಿನಂತೆ ಇದ್ದ ಲಕ್ಷ್ಮಣನೂ ರಾಮನೊಂದಿಗೆ ಸೇರಿಕೊಳ್ಳುತ್ತಾನೆ ಎಂಬುದಾಗಿ ಸ್ವಾರಸ್ಯಕರವಾದ ಉಪಕತೆಗಳೊಂದಿಗೆ ವಿದ್ವಾಂಸರಾದ ಡಾ. ರಾಘವೇಂದ್ರ ರಾವ್ ಪಡುಬಿದ್ರಿಯವರು ತಮ್ಮ ಉಪನ್ಯಾಸದಲ್ಲಿ ಪ್ರಸ್ತುತ ಪಡಿಸಿದರು.

    ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ ಮತ್ತು ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ತಾಲೂಕು ಘಟಕ ಇವುಗಳ ಸಹಭಾಗಿತ್ವದಲ್ಲಿ ೨೦೨೫ರ ವರ್ಷ ಪ್ರತೀ ತಿಂಗಳು ರಾಮಸಾಗರಗಾಮಿನೀ ಎಂಬ ಶ್ರೀಮದ್ ವಾಲ್ಮೀಕಿ ರಾಮಾಯಣ ದರ್ಶನ ಉಪನ್ಯಾಸವನ್ನು ಹಮ್ಮಿಕೊಂಡಿದ್ದು ಮಾಲೆಯ ಸಪ್ತಮ ಸೋಪಾನ ಚಿತ್ರಕೂಟದ ಚಿತ್ರ ಎಂಬ ವಿಷಯದ ಕುರಿತು ಜುಲೈ ೧೯ರಂದು ಕಾರ್ಕಳದ ಹೋಟೆಲ್ ಪ್ರಕಾಶ್ ಇದರ ಸಂಭ್ರಮ ಸಭಾಂಗಣದಲ್ಲಿ ಅವರು ಉಪನ್ಯಾಸ ನೀಡಿದರು.

   ಇಡೀ ಅಯೋಧ್ಯೆ ರಾಮನನ್ನು ಪರಿಪರಿಯಾಗಿ ಬೇಡಿಕೊಂಡರೂ ರಾಮ ತನ್ನ ನಿರ್ಧಾರವನ್ನು ಬದಲಿಸದೆ ವನವಾಸಕ್ಕೆ ತೆರಳಿದ. ಸಮತಾ, ಗೋಮತಿ ನದಿಗಳನ್ನು ದಾಟಿ ಬಾಲ್ಯ ಸ್ನೇಹಿತ ಗುಹನು ಭೆಟಿಯಾಗಿ ಅರಮನೆಗೆ ಬರುವಂತೆ ಬೇಡಿಕೊಂಡರೂ ಅಲ್ಲಿಗೆ ಹೋಗದೆ ರಾತ್ರಿ ನದಿ ತಟದಲ್ಲಿಯೇ ಕಳೆದು ಮರುದಿನ ಅವರು ಚಿತ್ರಕೂಟ ಪರ್ವತದೆಡೆಗೆ ಪ್ರಯಾಣ ಮುಂದುವರಿಸುತ್ತಾರೆ ಎಂಬುದನ್ನು ಅವರು ಆಕರ್ಷಕವಾಗಿ ವಿವರಿಸಿದರು.

   ಡಾ.ನಾ.ಮೊಗಸಾಲೆ, ನಿತ್ಯಾನಂದ ಪೈ, ಏರ್ ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಮತ್ತು ಮಿತ್ರಪ್ರಭಾ ಹೆಗ್ಡೆಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೀರ್ತನಕಾರರಾದ ವೈ ಅನಂತ ಪದ್ಮನಾಭ ಭಟ್ ಪ್ರಾರ್ಥಿಸಿದರು. ಸುಲೋಚನಾ ಬಿ.ವಿ. ಕಾರ್ಯಕ್ರಮ ನಿರೂಪಿಸಿದರು. ಸದಾನಂದ ನಾರಾವಿ ಸ್ವಾಗತಿಸಿ ಮಾಲತಿ ವಸಂತರಾಜ್ ವಂದಿಸಿದರು.

Previous Post

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಅಡ್ಡಿಪಡಿಸಿದ ಬಿಜೆಪಿ ಗ್ರಾ. ಪಂ ಸದಸ್ಯರ ವಿರುದ್ದ ಕಾಂಗ್ರೆಸ್ ಪ್ರತಿಭಟನೆ..!!

Next Post

ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!

ನಿಮಿಷಾ ಪ್ರಿಯಾ ಮರಣದಂಡನೆ ರದ್ದು : ಧರ್ಮಗುರು ಡಾ. ಕೆ.ಎ. ಪೌಲ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

ಬೀಡಿ ಎಂಡ್ ಟೋಬ್ಯಾಕೊ ಲೇಬರ್ ಯೂನಿಯನ್ ಉಡುಪಿ (ಸಿಐಟಿಯು) ಇದರ 45 ವಾರ್ಷಿಕ ಮಹಾಸಭೆ..!

09/08/2026
ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

ಕಾರ್ಕಳ ಸರಕಾರಿ ಆಸ್ಪತ್ರೆಯ ವ್ಯವಸ್ಥೆ ಸರಿಪಡಿಸಲು ಹಾಗೂ ಅರೋಗ್ಯ ಕೇಂದ್ರ ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಕಾಂಗ್ರೆಸ್ ನಿಯೋಗ ಮನವಿ

09/08/2026
ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

ಅಧಿವಕ್ತಪರಿಷತ್ ವತಿಯಿಂದ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಗುರುವಂದನೆ

09/08/2026
ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

ಅಜ್ಜರಕಾಡು ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ಕೌಶಲ್ಯಾಭಿವೃದ್ಧಿ ಬೂಟ್‌ಕ್ಯಾಂಪ್‌ಗೆ ಚಾಲನೆ

09/08/2026

Recent News