ಉಡುಪಿ : ಜುಲೈ 25:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ ವತಿಯಿಂದ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಸ್ವಾಮೀಜಿ ಯವರ ಸಂಕಲ್ಪದಂತೆ ಆಯೋಜಿಸಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು
ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿದ್ದರು ಸಮಾರಂಭದಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ಸಹ ಕುಲಪತಿ ಡಾ. ಎಚ್. ಎಸ್. ಬಲ್ಲಾಳ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.








