ಉಡುಪಿ:ಜುಲೈ 27: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ತಡೆದು ವಿಚಾರಣೆ ನಡೆಸಿದ ವೇಳೆ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಯತ್ನಿಸಿ ಮತ್ತು ಅವರ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸದಂತೆ ತಡೆದ ಘಟನೆ ಜುಲೈ 26 ರಂದು ಬೆಳಗಿನ ಜಾವ 2:30 ರ ಸುಮಾರಿಗೆ ನಡೆದಿದೆ
ಆರೋಪಿಯನ್ನು ಉಡುಪಿ ತಾಲ್ಲೂಕು ಕೊಡವೂರು ಗ್ರಾಮದ ಜುಮಾದಿನಗರ ನಿವಾಸಿ ಸಾಗರ್ (25) ಎಂದು ಗುರುತಿಸಲಾಗಿದೆ. ಮಣಿಪಾಲ ಪೊಲೀಸರು ಕೂಡಲೇ ಆತನನ್ನು ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ








