Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!

Dhrishya News by Dhrishya News
30/07/2025
in ಸುದ್ದಿಗಳು
0
ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ..!!
0
SHARES
15
VIEWS
Share on FacebookShare on Twitter

ಮಂಗಳೂರು: ಜುಲೈ 30: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ ಸಮಿತಿಯ ಪದಾಧಿಕಾರಿಗಳನ್ನು ನೇಮಿಸುವ ಕಾರ್ಯ ಆರಂಭಿಸುವಂತೆ ಅವರಿಗೆ ತಿಳಿಸಲಾಗಿದೆ.

ಬೂತ್ ಅಧ್ಯಕ್ಷರಾಗಿ, ವಾರ್ಡ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ, ದಕ್ಷಿಣ ಕನ್ನಡ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿಯಾಗಿ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಸಂಯೋಜಕರಾಗಿ ಹೀಗೆ ವಿವಿಧ ಹಂತಗಳಲ್ಲಿ ಅವರು ಪಕ್ಷ ಸೇವೆ ಸಲ್ಲಿಸಿದ್ದಾರೆ.

ಪಕ್ಷಕ್ಕಾಗಿ ಬೂತ್ ಮಟ್ಟದಿಂದ ದುಡಿದಿರುವ ಜಿಲ್ಲಾ ಮುಖಂಡರಾದ ಡೆನಿಸ್ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಳ ಪರವಾಗಿ ನಗರ ಪಾಲಿಕೆ, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅತ್ಯುತ್ತಮ ಸಂಘಟಕರಾದ ಅವರು ಸಾಮಾಜಿಕ ಸಾಮರಸ್ಯ ಮೂಡಿಸುವ ಕಾರ್ಯಕ್ರಮಗಳು, ಜಾಗೃತಿ ಅಭಿಯಾನಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕವಾಗಿಯೂ ಗುರುತಿಸಿಕೊಂಡಿದ್ದಾರೆ. ಜೊತೆಗೆ, ಭಾರತೀಯ ಕಥೋಲಿಕ ಯುವ ಸಂಚಾಲನದ ಮಂಗಳೂರು ಧರ್ಮಪ್ರಾಂತ್ಯದ ಅಧ್ಯಕ್ಷರಾಗಿ ಹಾಗೂ ರಾಜ್ಯಾಧ್ಯಕ್ಷರಾಗಿ ಸಮುದಾಯದ ಉನ್ನತಿಗೆ ಶ್ರಮಿಸಿದ್ದಾರೆ. ಸಾಕಷ್ಟು ಸಾಮಾಜಿಕ ಚಟುವಟಿಕೆಗಳನ್ನು ಕೂಡ ಆಯೋಜಿಸುತ್ತಾ ಬಂದಿರುವುದರ ಜೊತೆಗೆ ವಿಪತ್ತು ನಿರ್ವಹಣೆ ಪರಿಹಾರ ಕಾರ್ಯಾಚರಣೆಗಳಲ್ಲೂ ಪಾಲ್ಗೊಂಡಿದ್ದಾರೆ.

Previous Post

ಆಗಸ್ಟ್ 3 ರಂದು ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ..!!!

Next Post

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : ‘ಕೋಟಿ ಚೆನ್ನಯೆರ್’ ನಾಟಕ ಯಶಸ್ವಿ ಪ್ರದರ್ಶನ

ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : 'ಕೋಟಿ ಚೆನ್ನಯೆರ್' ನಾಟಕ ಯಶಸ್ವಿ ಪ್ರದರ್ಶನ

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026

Recent News

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸದಸ್ಯತ್ವದ ಕಾರ್ಡ್ ವಿತರಣೆ

24/06/2026
ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ಮಕ್ಕಳ ಮೂಳೆ ಮಜ್ಜೆ ಕಸಿ ಮತ್ತು ಜೀವಕೋಶ ಚಿಕಿತ್ಸಾ ಘಟಕ (BHIM) ಉದ್ಘಾಟನೆ

24/06/2026
“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

“ಆರೋಗ್ಯಪೂರ್ಣ ಆಹಾರ ಪದ್ಧತಿ” ಕಾರ್ಯಗಾರ

24/06/2026
ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

ಉಡುಪಿ : ಜುಲೈ 5ರಂದು ಮೆಹೆಂದಿ ಸ್ಪರ್ಧೆ..!

24/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved