ಉಡುಪಿ :ಆಗಸ್ಟ್ 01 :ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಉಡುಪಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರೂ, ಯಕ್ಷ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಯಕ್ಷಗಾನ ಕಲಾರಂಗದ ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿ ಕಡೆಕಾರ್ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು.








