Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು..!

Dhrishya News by Dhrishya News
02/08/2025
in ಸುದ್ದಿಗಳು
0
0
SHARES
41
VIEWS
Share on FacebookShare on Twitter

ಬೆಂಗಳೂರು, ಆಗಸ್ಟ್ 2: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆ ನಂತರ ಆಕೆಯನ್ನು ಅಪಹರಿಸಿದ್ದ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂಬುದು ಸಾಬೀತಾಗಿದ್ದು, ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಶಿಕ್ಷೆ ಪ್ರಮಾಣ ಪ್ರಕಟ: ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಅಪಹರಣ ಮಾಡಿದ ಆರೋಪದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್​​​ಗೆ ಏನೇನು ಶಿಕ್ಷೆಯಾಯಿತು ಎಂಬ ವಿವರ ಇಲ್ಲಿದೆ.

ಇದಕ್ಕೂ ಮುನ್ನ ಪ್ರಾಸಿಕ್ಯೂಷನ್ ಪರ ವಕೀಲರಾದ ಬಿಎನ್‌ ಜಗದೀಶ್‌, ಎಸ್​​ಪಿಪಿ ಅಶೋಕ್ ನಾಯಕ್ ವಾದ ಮಂಡಿಸಿ ಪ್ರಜ್ವಲ್​​ಗೆ ಗರಿಷ್ಠ ಶಿಕ್ಷೆ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಅದಾದ ನಂತರ ವಾದ ಮಂಡನೆ ಮಾಡಿದ್ದ ಪ್ರಜ್ವಲ್ ಪರ ವಕೀಲೆ ನಳಿನಿ ಮಾಯೇಗೌಡ, ಶಿಕ್ಷೆ ನೀಡುವ ವೇಳೆ ಅಪರಾಧಿಯ ರಾಜಕೀಯ ಭವಿಷ್ಯ, ವಯಸ್ಸು ಇತ್ಯಾದಿಗಳನ್ನೆಲ್ಲ ಪರಿಗಣಿಸಬೇಕು ಎಂದು ಮನವಿ ಮಾಡಿದ್ದರು.

ನಂತರ ಪ್ರಜ್ವಲ್ ಅಭಿಪ್ರಾಯವನ್ನು ನ್ಯಾಯಾಲಯ ಕೋರಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಪ್ರಜ್ವಲ್, ಸಂಸದನಾಗಿದ್ದಾಗ ಯಾರೂ ಆರೋಪ ಮಾಡಿರಲಿಲ್ಲ. ಆಗ ಏಕೆ ಆರೋಪಿಸಿರಲಿಲ್ಲ? ಚುನಾವಣೆ ಸಮಯದಲ್ಲಿಯೇ ಯಾಕೆ ಹಾಗೆ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದರಲ್ಲದೆ, ನ್ಯಾಯಾಲಯ ಏನೇ ತೀರ್ಮಾನ ಕೈಗೊಂಡರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದಿದ್ದರು.

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.

ಒಟ್ಟಾರೆಯಾಗಿ ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಅವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

Previous Post

ಇಂದು ಆ.2 ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ..!!

Next Post

ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

ಮಾಹೆ: ಎರಡು ದಿನದ ವಿಜ್ಞಾನ ವಿಚಾರ ಸಂಕಿರಣ ರಸಾಯನ 21ರಲ್ಲಿ ವಿಶ್ವದ ಪ್ರಮುಖ ವಿಜ್ಞಾನಿಗಳು ಭಾಗಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026

Recent News

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

ಕಾರ್ಕಳ ರಸ್ತೆ ಯಲ್ಲಿ ಕಾಣಿಸಿಕೊಂಡ ಚಿರತೆ

26/06/2026
ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

ಕಾರ್ಕಳ ಹಿರಿಯ ನಾಗರಿಕರ ಸಂಘದಲ್ಲಿ ಆರೋಗ್ಯ ಮತ್ತು ಕಾನೂನು ಅರಿವು ಕಾರ್ಯಕ್ರಮ

26/06/2026
ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

ಮಾರಿಷಸ್ ರಾಷ್ಟ್ರಾಧ್ಯಕ್ಷರನ್ನು ಅನುಗ್ರಹಿಸಿದ ಶ್ರೀ ಪುತ್ತಿಗೆ ಶ್ರೀಗಳು

26/06/2026
ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

ಪ್ರವಾಸ ಪ್ರೇಮಿ ಕಂಟೆಂಟ್ ಕ್ರಿಯೇಟರ್ ಗಳಿಗಾಗಿ ಕ್ಲಿಯರ್‌ ಟ್ರಿಪ್ ನಿಂದ ಕ್ರಿಯೇಟರ್ಸ್ ಕ್ಲಬ್ ಆರಂಭ

25/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved