ಉಡುಪಿ:ಆಗಸ್ಟ್ 02: ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ನಿವಾಸಿಗಳು ಭೂ ವಿನ್ಯಾಸ ನಕ್ಷೆ , ನಮೂನೆ 9 ಹಾಗೂ 11ಎ, ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಣೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ತೀವ್ರ ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ, ಈ ಸಮಸ್ಯೆಗಳ ಪರಿಹಾರಕ್ಕಾಗಿ ಇಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಬೇಟಿ ನೀಡಿ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಉಡುಪಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ ಅವರು ಉಪಸ್ಥಿತರಿದ್ದರು.








