ಉಡುಪಿ :ಆಗಸ್ಟ್, 02 :ಶ್ರೀ ಶೀರೂರು ಮಠದ 2026- 28 ಸಾಲಿನ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಪರ್ಯಾಯ ಸ್ವಾಗತ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರೂ, ಸ್ವಾಗತ ಸಮಿತಿಯ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಶೀರೂರು ಮಠದ ಪರ್ಯಾಯ ಮಹೋತ್ಸವವನ್ನು ಅತ್ಯಂತ ವಿಶೇಷವಾಗಿ ವೈಭವದಿಂದ ನಡೆಸಲು ಸರ್ವರ ಸಹಕಾರ ಕೋರಿದರು.
ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಶೀರೂರು ಮಠದ ದಿವಾನರಾದ ಶ್ರೀ ಉದಯ ಕುಮಾರ್ ಸರಳತ್ತಾಯ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ, ಕೋಶಾಧಿಕಾರಿ ಶ್ರೀ ಜಯಪ್ರಕಾಶ ಕೆದ್ಲಾಯ, ಗಣ್ಯರಾದ ಶ್ರೀ ರಾಘವೇಂದ್ರ ಆಚಾರ್ಯ, ಸ್ವಾಗತ ಸಮಿತಿಯ ಸಂಚಾಲಕರಾದ ಶ್ರೀಧರ ಭಟ್, ಶ್ರೀ ರಮೇಶ ಕಾಂಚನ್, ಶ್ರೀ ಸುಪ್ರಸಾದ್ ಶೆಟ್ಟಿ ಬೈಕಾಡಿ ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.








