ಉಡುಪಿ: ಆಗಸ್ಟ್ 02:ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಂಗಳೂರು ಆಡಳಿತ ಕಚೇರಿಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಶ್ರೀ ಕೃಷ್ಣ ಮೋಹನ್ ಮುಚರ್ಲಾ ಮತ್ತು ಉಡುಪಿ ಪ್ರಾದೇಶಿಕ ವ್ಯವಹಾರ ಕಚೇರಿಯ ರೀಜನಲ್ ಮ್ಯಾನೇಜರ್ ಶ್ರೀ ಬಿ ಪ್ರಕಾಶ್ ಅಡಿಗ ಅವರು ಶ್ರೀಕೃಷ್ಣನ ದರ್ಶನ ಪಡೆದು 2 ಲಕ್ಷ ದ ಚೆಕ್ ನ್ನು ಕೃಷ್ಣಾಷ್ಟಮಿಯ ಮಂಡಲೋತ್ಸವಕ್ಕೆ ಶ್ರೀ ಪುತ್ತಿಗೆ ಸ್ವಾಮೀಜಿಯವರಿಗೆ ಹಸ್ತಾಂತರಿಸಿ ಅನುಗ್ರಹ ಮಂತ್ರಾಕ್ಷತೆ ಪಡೆದರು.
ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ವ್ಯವಸ್ಥಾಪಕ ಕೀಳಂಜೆ ಶ್ರೀ ಕೃಷ್ಣರಾಜ ಭಟ್ ಅವರು ಉಪಸ್ಥಿತರಿದ್ದರು.








