ಉಡುಪಿ:ಆಗಸ್ಟ್ 04:ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ ಕಾರ್ಯಕ್ರಮದ ಆಯೋಜನೆಯ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಉಡುಪಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ನಾರಾಯಣ ಗುರುಗಳ ಜೀವನ ಸಂದೇಶವನ್ನು ಇಂದಿನ ಯುವ ಜನತೆಗೆ ತಲುಪಿಸುವ ನಿಟ್ಟಿನಲ್ಲಿ ವಿಶೇಷ ಮುತುವರ್ಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.*
*ಉಡುಪಿ ಜಿಲ್ಲೆಯ ಬಿಲ್ಲವ ಸಮುದಾಯಯದ ನಾಯಕರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ನಾರಾಯಣ ಗುರುಗಳ ಜಯಂತಿ ಆಚರಣೆಯ ಬಗ್ಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.*
*ಸಭೆಯಲ್ಲಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಶ್ರೀ ಅಬಿದ್ ಗದ್ಯಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪ ನಿರ್ದೇಶಕರಾದ ಶ್ರೀಮತಿ ಪೂರ್ಣಿಮ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಬಿಲ್ಲವ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.*








