Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!

Dhrishya News by Dhrishya News
05/08/2025
in ಸುದ್ದಿಗಳು
0
ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಸಭೆ..!!
0
SHARES
10
VIEWS
Share on FacebookShare on Twitter

ಉಡುಪಿ : ಆಗಸ್ಟ್ 05:ಉಡುಪಿ ನಗರಸಭಾ ವ್ಯಾಪ್ತಿಯ ಮೆಸ್ಕಾಂ, ಲೋಕೋಪಯೋಗಿ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿತ ಸಮಸ್ಯೆಗಳ ಬಗ್ಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ನಗರಸಭೆ ಕಚೇರಿಯಲ್ಲಿ ಸಭೆ ನಡೆಸಿದರು.

ಮಳೆ ಗಾಳಿ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆಯ ಮೂಲಕ ವಿದ್ಯುತ್ ಶೀಘ್ರ ಮರು ಸಂಪರ್ಕಕ್ಕೆ ಆದ್ಯತೆ ನೀಡಿ, ದಾರಿ ದೀಪ ನಿರ್ವಹಣೆ, ಹೊಸ ಟ್ರಾನ್ಸ್ ಫಾರ್ಮರ್ ಅಳವಡಿಕೆ ಹಾಗೂ ತುರ್ತು ಸಂದರ್ಭದಲ್ಲಿ ಅಗತ್ಯ ಸಿಬ್ಬಂದಿಗಳ ನಿಯೋಜನೆಗೆ ಕ್ರಮ ವಹಿಸುವಂತೆ ಸೂಚನೆ ನೀಡಿದರು. 

ಮಳೆಯಿಂದ ಹದಗೆಟ್ಟಿರುವ ಲೋಕೋಪಯೋಗಿ ಇಲಾಖೆ ಸಂಬಂಧಿತ ರಸ್ತೆಗಳನ್ನು ತುರ್ತು ರಿಪೇರಿ ನಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

 ರಾಷ್ಟೀಯ ಹೆದ್ದಾರಿ 66 ಉಂಟಾಗಿರುವ ಅಪಾಯಕಾರಿ ಗುಂಡಿಗಳನ್ನು ತಕ್ಷಣ ಸರಿಪಡಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವ ಜೊತೆಗೆ ಸಂತೆಕಟ್ಟೆ ಅಂಡರ್ ಪಾಸ್, ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಹಾಗೂ ಈಗಾಗಲೇ ಮಂಜೂರಾತಿಗೊಂಡಿರುವ ನೂತನ ಸರ್ವೀಸ್ ರಸ್ತೆ ಕಾಮಗಾರಿ ತಕ್ಷಣ ಪ್ರಾರಂಭ ಹಾಗೂ ರಾಷ್ಟ್ರೀಯ ಹೆದ್ದಾರಿ 169 ಎ ಕೆಳ ಪರ್ಕಳ ರಸ್ತೆ ಕಾಂಕ್ರೀಟಿಕರಣ, ಇಂದ್ರಾಳಿ ರೈಲ್ವೇ ಬ್ರಿಡ್ಜ್, ಮಲ್ಪೆ ಆದಿ ಉಡುಪಿ ಕಾಮಗಾರಿ ಆದ್ಯತೆಯ ಮೇರೆಗೆ ನಡೆಸಲು ತಿಳಿಸಿದರು.

ನಗರಸಭಾ ವ್ಯಾಪ್ತಿಯ ವಾರಾಹಿ ಯೋಜನೆಯ ಮೂಲಕ ಒಪ್ಪಂದದಂತೆ ಎಲ್ಲಾ ವಾರ್ಡ್ ಗಳಿಗೆ ಕುಡಿಯುವ ನೀರು 24 ಗಂಟೆ ನಿರಂತರ ಸರಬರಾಜಿಗೆ ಕ್ರಮ ವಹಿಸಿ, ಅನಿವಾರ್ಯ ಕಾರಣಗಳಿಂದ ನೀರು ಸರಬರಾಜಿನಲ್ಲಿ ವ್ಯತ್ಯಯವಾದಾಗ ತಕ್ಷಣ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮೂಲಕ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ ನಿರ್ಮಿಸಿರುವ ನೂತನ ವಸತಿ ಸಮುಚ್ಛಯದ ಕಾಮಗಾರಿಯ ಪ್ರಗತಿ ಹಾಗೂ ರಸ್ತೆ, ಚರಂಡಿ, ದಾರಿದೀಪ ಸಹಿತ ಮೂಲ ಸೌಕರ್ಯ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸುಂದರ ಕಲ್ಮಾಡಿ, ಪೌರಾಯುಕ್ತರಾದ ಶ್ರೀ ಮಹಾಂತೇಶ್ ಹಂಗರಗಿ, ವಿವಿಧ ಇಲಾಖೆಯ ಅಧಿಕಾರಿಗಳು, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

Previous Post

ಕರ್ನಾಟಕ ಹೈಕೋರ್ಟ್‌ ಆದೇಶ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ವಾಪಸ್‌..!!

Next Post

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ ‘ಆಟಿಡೊಂಜಿ ಜೋಕ್ಲೆನ ಕೂಟ’: ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

ಎಳ್ಳಾರೆ ಮುಳ್ಕಾಡು ಶಾಲೆಯಲ್ಲಿ 'ಆಟಿಡೊಂಜಿ ಜೋಕ್ಲೆನ ಕೂಟ': ಸಂಸ್ಕೃತಿ ಮತ್ತು ಪರಿಸರ ಜಾಗೃತಿ ಕಾರ್ಯಕ್ರಮ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲದಲ್ಲಿ ಅಂದರ್‌ ಬಾಹರ್‌ ಜುಗಾರಿ: 6 ಮಂದಿ ವಶಕ್ಕೆ

ಮಣಿಪಾಲದಲ್ಲಿ ಅಂದರ್‌-ಬಾಹರ್‌ ಜುಗಾರಿ; ಆರು ಮಂದಿ ವಶಕ್ಕೆ

30/09/2026
ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

ಬೈಂದೂರು: ಅರಣ್ಯ ಪ್ರದೇಶದಲ್ಲಿ ಇಬ್ಬರ ಮೃತದೇಹ ಪತ್ತೆ

30/09/2026
ಶಿರ್ವದಲ್ಲಿ ಕೋಳಿ ಜೂಜಾಟ: 9 ಮಂದಿ ಬಂಧನ, 13 ಕೋಳಿ ಹುಂಜಗಳು ಸಹಿತ ವಿವಿಧ ವಸ್ತುಗಳ ಸ್ವಾಧೀನ

ಮಲ್ಪೆಯಲ್ಲಿ ಕೋಳಿ ಅಂಕಕ್ಕೆ ಪೊಲೀಸರ ದಾಳಿ; ಐವರು ವಶಕ್ಕೆ

30/09/2026
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026

Recent News

imunify-bot-check