ಉಡುಪಿ: ಆಗಸ್ಟ್ 06: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಿನಾಂಕ 08.08.2025, ಶುಕ್ರವಾರ ಬೆಳಿಗ್ಗೆ ಗಂಟೆ 9.30 ರಿಂದ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿದ್ದು ಮಧ್ಯಾಹ್ನ ಗಂಟೆ 12.00 ಕ್ಕೆ ಮಹಾ ಪೂಜೆ ತದನಂತರ ಮಹಾ ಅನ್ನ ಸಂತರ್ಪಣೆ ನಡೆಯಲಿದೆ. ಹಾಗಾಗಿ ಎಲ್ಲಾ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಮಾತೆ ಶ್ರೀ ಮಹಾಲಕ್ಷ್ಮೀ ಅಮ್ಮನವರ ಪ್ರಸಾದವನ್ನು ಸ್ವೀಕರಿಸಿ ತಾಯಿಯ ಕೃಪಾನುಗ್ರಹಕ್ಕೆ ಪಾತ್ರರಾಗುವಂತೆ ಶ್ರೀ ಕ್ಷೇತ್ರ ಉಚ್ಚಿಲದ ಪ್ರಕಟಣೆ ತಿಳಿಸಿದೆ





