Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಮುಖಪುಟ

ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆ ಆತ್ಮಹತ್ಯೆ..!!

Dhrishya News by Dhrishya News
07/08/2025
in ಮುಖಪುಟ
0
0
SHARES
99
VIEWS
Share on FacebookShare on Twitter

ದಕ್ಷಿಣ ಕನ್ನಡ : ಆಗಸ್ಟ್ 07:  ಪುತ್ತೂರಿನ ಪ್ರತಿಭಾವಂತ ಯುವ ಪಶುವೈದ್ಯೆಯೊಬ್ಬರು ಮಂಗಳೂರಿನ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಸೋಮವಾರ ರಾತ್ರಿ ನಡೆದಿದೆ.

ಪುತ್ತೂರು ತಾಲೂಕಿನ ಬಪ್ಪಳಿಗೆ ನಿವಾಸಿ, ಖ್ಯಾತ ಚಾರ್ಟೆಡ್ ಅಕೌಂಟೆಂಟ್ ಗಣೇಶ್ ಜೋಶಿ ಅವರ ಪುತ್ರಿ ಡಾ.ಕೀರ್ತನಾ ಜೋಶಿ (27) ಅವರೇ ದುರಂತ ಅಂತ್ಯ ಕಂಡವರು. ಮಂಗಳೂರಿನಲ್ಲಿ ಪಶು ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕೀರ್ತನಾ, ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಇಹಲೋಕ ತ್ಯಜಿಸಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣಗಳು ಸದ್ಯಕ್ಕೆ ತಿಳಿದುಬಂದಿಲ್ಲ. ಆದರೆ, ಈ ಘಟನೆ ಅವರ ಕುಟುಂಬ ಮತ್ತು ಸ್ನೇಹಿತರ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ.

ಪಶು ವೈದ್ಯಕೀಯದಲ್ಲಿ ಸ್ನಾತಕೋತ್ತರ ಪದವಿ (ಎಂ.ಡಿ.) ಪಡೆದಿದ್ದ ಡಾ. ಕೀರ್ತನಾ ಜೋಶಿ ಅವರು ಶಾಲಾ ಶಿಕ್ಷಣದಿಂದ ವೈದ್ಯರಾಗುವವರೆಗೂ ಅತ್ಯಂತ ಪ್ರತಿಭಾವಂತೆ ಎನಿಸಿಕೊಂಡಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಪುತ್ತೂರು, ಕೊಯಿಲ ಹಾಗೂ ಮಂಗಳೂರಿನಲ್ಲಿ ಪಶು ವೈದ್ಯರಾಗಿ ಕಾರ್ಯನಿರ್ವಹಿಸಿ, ಪ್ರಾಣಿಪ್ರಿಯರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ವೃತ್ತಿಪರತೆಯು ಎಲ್ಲರಿಗೂ ಚಿರಪರಿಚಿತವಾಗಿತ್ತು. ಇಂತಹ ಉಜ್ವಲ ಭವಿಷ್ಯವಿದ್ದ ವೈದ್ಯೆಯೊಬ್ಬರು ದಿಢೀರ್ ಸಾವಿನ ನಿರ್ಧಾರ ಕೈಗೊಂಡಿರುವುದು ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ.

ಮಂಗಳವಾರ ಡಾ. ಕೀರ್ತನಾ ಅವರ ಮೃತದೇಹವನ್ನು ಪುತ್ತೂರಿನ ಬಪ್ಪಳಿಗೆಯಲ್ಲಿರುವ ಸ್ವಗೃಹಕ್ಕೆ ತರಲಾಯಿತು. ಅಲ್ಲಿ ಕುಟುಂಬಸ್ಥರು, ಬಂಧುಗಳು ಮತ್ತು ನೂರಾರು ಹಿತೈಷಿಗಳ ಆಕ್ರಂದನದ ನಡುವೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಇಡೀ ಬಪ್ಪಳಿಗೆ ಗ್ರಾಮ ಶೋಕಸಾಗರದಲ್ಲಿ ಮುಳುಗಿತ್ತು. ಮೃತ ಕೀರ್ತನಾ ತಂದೆ ಗಣೇಶ್ ಜೋಶಿ, ತಾಯಿ ವೀಣಾ ಜೋಶಿ, ಸಹೋದರಿ ಡಾ. ಮೇಘನಾ ಜೋಶಿ ಸೇರಿದಂತೆ ಅಪಾರ ಬಂಧು ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ. ಈ ಅಕಾಲಿಕ ಸಾವಿನ ಹಿಂದಿನ ಕಾರಣಗಳ ಬಗ್ಗೆ ತನಿಖೆ ಮುಂದುವರೆದಿದೆ.

Previous Post

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಗಸ್ಟ್ 8 ರಂದು ವರಮಹಾಲಕ್ಷ್ಮಿ ವೃತಪೂಜೆ..!!

Next Post

ಉದ್ಯಾವರ : ನೃತ್ಯ ಪ್ರದರ್ಶನದ ವಿಶ್ವದಾಖಲೆ ಸಾಧಿಸಿದ ರೆಮೊನಾ ಎವೆಟ್ ಪಿರೇರಾಗೆ ಸನ್ಮಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉದ್ಯಾವರ : ನೃತ್ಯ ಪ್ರದರ್ಶನದ ವಿಶ್ವದಾಖಲೆ ಸಾಧಿಸಿದ ರೆಮೊನಾ ಎವೆಟ್ ಪಿರೇರಾಗೆ ಸನ್ಮಾನ..!!

ಉದ್ಯಾವರ : ನೃತ್ಯ ಪ್ರದರ್ಶನದ ವಿಶ್ವದಾಖಲೆ ಸಾಧಿಸಿದ ರೆಮೊನಾ ಎವೆಟ್ ಪಿರೇರಾಗೆ ಸನ್ಮಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

ಕಾರ್ಕಳ: ಸ್ವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಮುಳುಗಿ ಸಾವು

30/09/2026
ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

ಉಡುಪಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ರಷ್ಯಾ ಪ್ರಜೆಯ ರಕ್ಷಣೆ: ಗೋವಾ ಪೊಲೀಸರಿಗೆ ಹಸ್ತಾಂತರ

30/09/2026
‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

‘ಪ್ರಧಾನಿ ನರೇಂದ್ರ ಮೋದಿ 25 ವರ್ಷಗಳ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ : ಶಾಸಕ ಕಿರಣ್ ಕುಮಾರ್ ಕೊಡ್ಗಿ

29/09/2026
ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

ಧನಾತ್ಮಕ ಮನೋಭಾವ ಬೆಳೆಸಲು ಮಹಾಭಾರತ ಪ್ರೇರಣೆ

29/09/2026

Recent News

imunify-bot-check