ಉಡುಪಿ: ಆಗಸ್ಟ್ 10:ಉಡುಪಿ ನಗರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಕಮಲ ಕಲರವ 2025 ಕೆಸರ್ಡ್ ಒಂಜಿ ದಿನ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.
*ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಮಾಜಿ ಜಿಲ್ಲಾಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಪಕ್ಷದ ಹಿರಿಯ ಮುಖಂಡರು, ನಗರ ಸಭಾ ಸದಸ್ಯರು, ವಿವಿಧ ಮೋರ್ಚಗಳ ಜಿಲ್ಲಾ ಹಾಗೂ ಮಂಡಲದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.*








