ಬಂಡೀಪುರ: ಆಗಸ್ಟ್ 12 : ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದ ಘಟನೆಗೆ ಸಂಬಂಧಿಸಿದಂತೆ ಇದೀಗ ‘ಸೆಲ್ಪಿ’ ಕ್ಲಿಕ್ಕಿಸಿದ ಪ್ರವಾಸಿಗನಿಗೆ ಅರಣ್ಯ ಇಲಾಖೆ 25,000 ರೂ ದಂಡ ವಿಧಿಸಿದೆ.
ವನ್ಯಜೀವಿಗಳಿಗೆ ತೊಂದರೆ ಕೊಡದಂತೆ, ಇನ್ನುಮುಂದೆ ಇಂತಹ ಕೆಲಸ ಮಾಡದಂತೆ ಮುಚ್ಚಳಿಕೆ ಬರೆಸಿಕೊಂಡು 25,000 ರೂ ದಂಡ ವಿಧಿಸಿದೆ.ಬಂಡೀಪುರದಲ್ಲಿ ‘ಸೆಲ್ಪಿ’ ಕ್ಲಿಕ್ಕಿಸಿಕೊಳ್ಳಲು ಬಂದ ಪ್ರವಾಸಿಗನನ್ನು ಕಾಡಾನೆಯೊಂದು ಅಟ್ಟಾಡಿಸಿ ತುಳಿದಿದ್ದು ಘಟನೆಯ ಭಯಾನಕ ವೀಡಿಯೋ ವೈರಲ್ ಆಗಿತ್ತು








