ಉಡುಪಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ 79 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿದರು.ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಅಶೋಕ್ ಕೊಡವೂರು, ಅಪರ ಜಿಲ್ಲಾಧಿಕಾರಿ ಶ್ರೀ ಅಬಿದ್ ಗದ್ಯಾಳ್, ಹಾಗೂ ಅಧಿಕಾರಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
#independencedaycelebration #udupi #LakshmiHebbalkar








