ಉಡುಪಿ:ಆಗಸ್ಟ್ 15 :ಮಜೂರು ಗ್ರಾಮ ಪಂಚಾಯತ್ ನವೀಕೃತ ಸಭಾಭವನ ಉದ್ಘಾಟನೆ ಹಾಗೂ ವಿವಿಧ ಕಾಮಗಾರಿಯ ಉದ್ಘಾಟನೆ ಮತ್ತು ವಿವಿಧ ಸವಲತ್ತು ವಿತರಣೆ ಕಾರ್ಯಕ್ರಮ ಇಂದು ದಿನಾಂಕ 15-08-2025 ರಂದು ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷೀ ಹೆಬ್ಬಾಳ್ಕರ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್, ಮಜೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಮಂಜುಳಾ ಆಚಾರ್ಯ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಸಹಾಯಕ ಆಯುಕ್ತರಾದ ರಶ್ಮಿ, ಕಾಪು ತಹಶೀಲ್ದಾರರಾದ ಪ್ರತೀಭಾ ಆರ್, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ ಹಾಗೂ ಮಜೂರು ಗ್ರಾಮ ಪಂಚಾಯತ್ ಸದಸ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.








