ಬೆಂಗಳೂರು:ಆಗಸ್ಟ್ 18 :ಇಂದು ಬೆಂಗಳೂರಿನ ಹೆಬ್ಬಾಳ ಜಂಕ್ಷನ್‌ನಲ್ಲಿ ಹೆಬ್ಬಾಳ ನೂತನ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಲೋಕಾರ್ಪಣೆ ಮಾಡಿದರು
ಈ ಸಂದರ್ಭದಲ್ಲಿ ಮಾತನಾಡಿದ ಸಿ ಎಂ ಬೆಂಗಳೂರಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಬದ್ಧತೆ ಇಟ್ಟುಕೊಂಡಿರುವ ನಮ್ಮ ಸರ್ಕಾರವು ಮೇಲ್ಸೇತುವೆಗಳು, ಮೆಟ್ರೋ ಕಾಮಗಾರಿಗಳು ಸೇರಿದಂತೆ ಪ್ರಯಾಣಿಕರಿಗೆ ಸಿಗ್ನಲ್ ಫ್ರೀ ಸಂಚಾರ ವ್ಯವಸ್ಥೆ ಕಲ್ಲಿಸಿಕೊಡಲು ಶಕ್ತಿಮೀರಿ ಶ್ರಮಿಸುತ್ತಿದೆ ಎಂದರು
K.R.ಪುರಂನಿಂದ ಮೇಖ್ರಿ ಸರ್ಕಲ್ ಕಡೆ ಸಂಪರ್ಕಿಸುವ 700 ಮೀಟರ್ ಉದ್ದದ ಹೊಸ ಮೇಲ್ಸೇತುವೆಯನ್ನು 80 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.
ಈ ವೇಳೆ ಸಚಿವರಾದ ಭೈರತಿ ಸುರೇಶ್, ಕೃಷ್ಣಭೈರೇಗೌಡ, ಶಾಸಕರಾದ ಎಸ್.ಆರ್.ವಿಶ್ವನಾಥ್, ಹ್ಯಾರಿಸ್, ನಟಿ ರಮ್ಯಾ ಉಪಸ್ಥಿತರಿದ್ದರು.








