ಬೆಂಗಳೂರು, ಆಗಸ್ಟ್ 18: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆ ಕೂಡ ಒಂದು. ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ಕರ್ನಾಟಕ ಸಾರಿಗೆ ಇಲಾಖೆಯ KSRTC, BMTC, NWKRTC ಮತ್ತು KKRTC ನಾಲ್ಕೂ ನಿಗಮಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಇದೀಗ, ಶಕ್ತಿ ಯೋಜನೆ ಪ್ರತಿಷ್ಠಿತ “ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್”ಗೆ ಸೇರ್ಪಡೆಯಾಗಿದೆ.
ಎರಡು ವರ್ಷಗಳಲ್ಲಿ 500 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಯ ಲಾಭ ಪಡೆದು ಪ್ರಯಾಣಿಸಿದ್ದಾರೆ. ಈ ಅಪಾರ ಯಶಸ್ಸಿನಿಂದಾಗಿ ಶಕ್ತಿ ಯೋಜನೆ “ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್” ನಲ್ಲಿ ಸ್ಥಾನ ಪಡೆದಿದೆ. ಶಕ್ತಿ ಯೋಜನೆ ರಾಜ್ಯದ ಆರ್ಥಿಕತೆ ಮತ್ತು ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದೆ.
2023ರ ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್ಗಳಲ್ಲಿ 5049476416 ಮಹಿಳೆಯರು (500 ಕೋಟಿ) ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದ ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದೆ.








