ನವದೆಹಲಿ: ಸೆ.9ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ (CP Radhakrishnan) ಅವರಿಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಸಚಿವರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅಲ್ಲದೇ ಇದು ಎನ್‌ಡಿಎ ಕೂಟದ ಒಗ್ಗಟಿನ ಪ್ರದರ್ಶನವೂ ಆಗಿದೆ.
ಮಹಾರಾಷ್ಟ್ರದ ಹಾಲಿ ರಾಜ್ಯಪಾಲರು ಆಗಿರುವ ರಾಧಾಕೃಷ್ಣನ್ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸುವ ವೇಳೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಉಪಸ್ಥಿತರಿದ್ದು ಬೆಂಬಲ ಸೂಚಿಸಿದ್ದಾರೆ. ಒಟ್ಟು 4 ಸೆಟ್ ಅರ್ಜಿಯನ್ನು ಅಲ್ಲಿಸಲಾಗಿದ್ದು, ಮೊದಲ ಸೆಟ್‌ನಲ್ಲಿ ದಾಖಲೆ ಸಲ್ಲಿಸುವ ವೇಳೆ ಮೋದಿ ಮುಖ್ಯ ಪ್ರತಿಪಾದಕರಾಗಿದ್ದರು.ನಾಮಪತ್ರ ಸಲ್ಲಿಕೆಗೂ ಮುನ್ನ ರಾಧಾಕೃಷ್ಣನ್ ಅವರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆ ನಮಸ್ಕರಿಸಿದರು. ಜೊತೆಗೆ ಮಹಾನ್ ವ್ಯಕ್ತಿಗಳ ಪುತ್ಥಳಿಗೆ ಗೌರವ ಸಲ್ಲಿಸಿದರು.








