ಕಾರ್ಕಳ : ಆಗಸ್ಟ್ 26:ಉಡುಪಿ ಜಿಲ್ಲೆಯ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ರಸ್ತೆಯ ಪಕ್ಕದಲ್ಲಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಕುಮಾರ್ ಎಂದು ಗುರುತಿಸಲಾಗಿದೆ. ನವೀನ್ ಕುಮಾರ್ ಎಂಬವರು ಕಾರ್ಕಳದ ಎಸ್ ಜೆ ಆರ್ಕೇಡ್ ನಲ್ಲಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳದಲ್ಲಿ ಉಡುಪಿ ಎಸ್‌ಪಿ ಹರಿರಾಂ ಶಂಕರ್, ಕಾರ್ಕಳ ಉಪವಿಭಾಗದ ಎಎಸ್ಪಿ ಡಾ. ಹರ್ಷಪ್ರಿಯಂವದ, ವೃತ್ತ ನಿರೀಕ್ಷಕ ಮಂಜಪ್ಪ ಡಿ.ಆರ್., ನಗರ ಠಾಣೆ ಎಸ್ಐ ಮುರಳೀಧರ್ ನಾಯ್ಕ್, ಗ್ರಾಮಾಂತರ ಠಾಣೆ ಎಸ್ಐ ಪ್ರಸನ್ನ ಎಂ.ಎಸ್. ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಹೆಚ್ಚಿನ ಮಾಹಿತಿ ಪೊಲೀಸರ ತನಿಖೆಯಿಂದಷ್ಟೇ ಲಭ್ಯವಾಗಬೇಕಿದೆ.








