ಉಡುಪಿ:ನಾಡಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆ ಮಾಡಿದೆ, ಗಣೇಶ ಚತುರ್ಥಿ ಹಬ್ಬದ ಆಚರಣೆಯ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 27ರ ಬುಧವಾರ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 27ರ ಬೆಳಿಗ್ಗೆ ಆರು ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಉಡುಪಿ ಜಿಲ್ಲೆಯಾದ್ಯಂತ , ಉಡುಪಿ ನಗರ ವ್ಯಾಪ್ತಿಯಲ್ಲಿ ದಿನಾಂಕ ಆಗಸ್ಟ್ 29 ಮತ್ತು ಆಗಸ್ಟ್ 31 ರಂದು ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 12 ಗಂಟೆಯ ವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.








