ಉಡುಪಿ:ಆಗಸ್ಟ್ 29 : ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಇದರ ಸಹಯೋಗದಲ್ಲಿ ಆಯೋಜಿಸಿದ್ದ ರಾಷ್ಟೀಯ ಕ್ರೀಡಾ ದಿನಾಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ವಹಿಸಿ ರಾಷ್ಟೀಯ ಕ್ರೀಡಾ ದಿನದ ಶುಭಾಶಯ ಸಲ್ಲಿಸಿದರು.*
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನಿತ್ಯಾನಂದ ಗಾಂವ್ಕರ್, ಕ್ರೀಡಾ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಷನ್ ಕುಮಾರ್ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.*








