ಉಡುಪಿ,ಸೆಪ್ಟೆಂಬರ್.1; ಹದಿನಾಲ್ಕು ಚಕ್ರಗಳ ಬೃಹತ್ ಗಾತ್ರದ ಟ್ರಕ್ ಹರಿದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಬಳಿ, ಇಂದು ಸಂಜೆ ನಡೆದಿದೆ.
ಮೃತ ಸವಾರನ ತಲೆ ಭಾಗವು ಛಿದ್ರಗೊಂಡಿದೆ. ಅಪಘಾತ ಸ್ಥಳದಿಂದ ಸುಮಾರು ನೂರು ಮೀಟರ್ ದೂರ ಟ್ರಕ್ ಎಳೆದು ಸಾಗಿಸಿದ್ದು ಅಪಘಾತದ ಭೀಕರತೆ ತೋರಿಸಿದೆ. ಮೃತ ಸವಾರ ದೊಂದುರುಕಟ್ಟೆಯ ಪ್ರದೀಪ (38ವ), ಅಂಬಲಪಾಡಿ ಸುರಭಿ ಅಟೋಮೊಬೈಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳದಲ್ಲಿದ್ದು ಸಂಚಾರಿ ಪೋಲಿಸ್ ಅಧಿಕಾರಿಗಳು ಕಾನೂನು ಪ್ರಕ್ರಿಯೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ನೆರವಾದರು.








