ಬೆಂಗಳೂರು: ಸೆಪ್ಟೆಂಬರ್ 03:ಕನ್ನಡ ಚಿತ್ರರಂಗದ ಹಿರಿಯ ಕಲಾವಿದರಾದ ವಿಷ್ಣುವರ್ಧನ್ ಹಾಗೂ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಜಯಮಾಲಾ, ಶ್ರುತಿ, ಮಾಳವಿಕಾ ಅವಿನಾಶ್ ಸೆಪ್ಟೆಂಬರ್ 2 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.
ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ‘ಕ್ಯಾಬಿನೆಟ್ನಲ್ಲಿ ಈ ಕುರಿತು ಚರ್ಚೆ ಮಾಡುವುದಾಗಿ ಸಿಎಂ ಭರವಸೆ ನೀಡಿದ್ದಾರೆ. ಇದರಿಂದ ನಮಗೆ ಖುಷಿ ಆಗಿದೆ’ ಎಂದು ಜಯಮಾಲಾ ಹೇಳಿದ್ದಾರೆ.








