ಉಡುಪಿ: ಸೆಪ್ಟೆಂಬರ್ 05:ಉಡುಪಿ ಜಿಲ್ಲಾ ಮಾಜಿ ಸೈನಿಕರ ವಿವಿಧೋದ್ದೇಶ ಸಹಕಾರ ಸಂಘ ಲಿ. ಆದಿಉಡುಪಿ, ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2024-25ನೇ ಸಾಲಿನ *”ಸಾಧನಾ ಪ್ರಶಸ್ತಿ” ಯನ್ನು ದ. ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಡಾ| ಎಂ . ಎನ್. ರಾಜೇಂದ್ರ ಕುಮಾರ್ ರವರಿಂದ ಸೊಸೈಟಿಯ ಅಧ್ಯಕ್ಷರಾದ ( Col. )ಡಾ.ಎಫ್. ಇ. ಎ. ರೋಡ್ರಿಗಸ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಮಶಿವ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀಮತಿ ಲಾವಣ್ಯ ಕೆ. ಆರ್., ಮಂಗಳೂರು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್. ಎನ್. ಹಾಗೂ ಜಿಲ್ಲಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರುಗಳು ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರದ ಚಂದ್ರಶೇಖರ್ ಸುವರ್ಣ, ಕೆ. ಗಣೇಶ್ ರಾವ್ , ಗಣಪಯ್ಯ ಶೇರಿಗಾರ್, ಗಿಲ್ಬರ್ಟ್ ಬ್ರಿಗಾಂಝಾ, ಪ್ರಭಾಕರ್ ನಾಯ್ಕ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.








