ಬೆಳ್ತಂಗಡಿ, ಸೆಪ್ಟೆಂಬರ್ 05: ರಾಷ್ಟ್ರೀಯ ಹೆದ್ದಾರಿಯ ಉಜಿರೆ-ಚಾರ್ಮಾಡಿ ರಸ್ತೆಯಲ್ಲಿ ಸೆಪ್ಟೆಂಬರ್ 03ರಂದು ಲಾರಿ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸೆ. 4 ಗುರುವಾರ ಸಂಜೆ ಮೃತಪಟ್ಟಿದ್ದಾರೆ.
ಮೃತರನ್ನು ಕಡಿರುದ್ಯಾವರ ಗ್ರಾಮದ ಮಲ್ಲಡ್ಕ ಸಮೀಪದ ನಿವಾಸಿ ಪುರುಷೋತ್ತಮ ಅಲಿಯಾಸ್ ಬಾಲು (44) ಎಂದು ಗುರುತಿಸಲಾಗಿದೆ.
ಮೃತರು ಕ್ವಾರಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.








