Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಕರಾವಳಿ

ನಾಳೆ (ಮೇ 13) ಉಡುಪಿಯ ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆಯಲ್ಲಿ ಮತ ಎಣಿಕೆ: ಉಡುಪಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ..!!

Dhrishya News by Dhrishya News
12/05/2023
in ಕರಾವಳಿ, ಸುದ್ದಿಗಳು
0
0
SHARES
25
VIEWS
Share on FacebookShare on Twitter

ಉಡುಪಿ: ಉಡುಪಿಯ  ಸೈಂಟ್ ಸಿಸಿಲಿಸ್ ವಿದ್ಯಾಸಂಸ್ಥೆ, ಬ್ರಹ್ಮಗಿರಿಯಲ್ಲಿ  ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ -2023 ಕ್ಕೆ ಸಂಬಂಧಿಸಿದಂತೆ, ಮತ ಎಣಿಕೆ ಕಾರ್ಯವು ಮೇ 13 ರಂದು ನಡೆಯಲಿದೆ. ಮತಎಣಿಕೆ ಕಾರ್ಯವು ಸುಸೂತ್ರವಾಗಿ ನಡೆಯಲು ಹಾಗೂ ನಂತರ ಕಾನೂನು ಸುವ್ಯವಸ್ಥೆಯನ್ನು ಕಾಯ್ದಕೊಂಡು, ಶಾಂತಿಯನ್ನು ಕಾಪಾಡುವ ಸಲುವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಮತ್ತು ಸುವ್ಯವಸ್ಥೆ, ಶಾಂತಿಪಾಲನೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ 1973 ರ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 (1) ರನ್ವಯ ಜಿಲ್ಲೆಯಾದ್ಯಂತ ಮೇ 13 ರಂದು ಬೆಳಿಗ್ಗೆ 5 ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

ಷರತ್ತುಗಳು

1. ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕರು 5 ಜನರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ನಿಷೇಧಿಸಿದೆ.

2. ಯಾವುದೇ ರೀತಿಯ ಸಾರ್ವಜನಿಕ ಮೆರವಣಿಗೆ, ವಿಜಯೋತ್ಸವ, ಕರಾಳೋತ್ಸವ, ಪ್ರತಿಭಟನಾ ಮೆರವಣಿಗೆ ಹಾಗೂ ವಿಜಯೋತ್ಸವದ ಅಂಗವಾಗಿ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಾಗೂ ಯಾವುದೇ ರೀತಿಯ ಘೋಷಣೆ ಕೂಗುವುದನ್ನು ನಿಷೇಧಿಸಿದೆ.

3. ಚುನಾವಣೆಯ ಮತ ಎಣಿಕೆ ಫಲಿತಾಂಶದ ವಿಜಯೋತ್ಸವದ ಸಮಯದಲ್ಲಿ ಪಟಾಕಿ/ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿದೆ.

4. ಈ ಅವಧಿಯಲ್ಲಿ ಯಾವುದೇ ಆಯುಧ, ಕುಡುಗೋಲು, ಖಡ್ಗ, ಭರ್ಜಿ, ಗಧೆ, ಕೋಲು, ಚೂರಿ, ದೊಣ್ಣೆ, ಲಾಠಿಗಳನ್ನು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಧರಿಸುವುದನ್ನು ಮತ್ತು ಯಾವುದೇ ಕಾರಕ ಯಾ ಸ್ಫೋಟಕ ವಸ್ತುಗಳು/ಪಟಾಕಿ | ಸಿಡಿಮದ್ದು ಹೊಂದುವುದನ್ನು ನಿಷೇಧಿಸಿದೆ.

5. ಯಾವುದೇ ಸಾರ್ವಜನಿಕ ಪ್ರದೇಶದಲ್ಲಿ ಕಲ್ಲುಗಳನ್ನು ಒಟ್ಟುಗೂಡಿಸುವುದು, ಯಾವುದೇ ಕ್ಷಿಪಣಿಗಳು ಅಥವಾ ಕ್ಷಿಪಣಿಯಾಗಿ ಉಪಯೋಗಿಸಲ್ಪಡುವ ಇತರ ಆಯುಧಗಳು ಮತ್ತು ಸಾಧನ ಸಾಮಾಗ್ರಿಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

6. ಈ ಅವಧಿಯಲ್ಲಿ ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು, ಪದ ಹಾಡುವುದು, ಗಾಯನ ಮಾಡುವುದು, ಆವೇಶ ಭಾಷಣ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚೇಷ್ಟೆ ಮಾಡುವುದು, ಚಿತ್ರಗಳ ಪ್ರದರ್ಶನ ತಯಾರಿಸುವುದು ಯಾ ಪುಸಾರ ಮಾಡುವುದು, ಗುರುತುಗಳು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳ ಪ್ರದರ್ಶನದಿಂದ ಸಭ್ಯತನ, ಸದಾಚಾರ, ಸಾರ್ವಜನಿಕ ಹಿತ ಯಾ ಭದ್ರತೆ ಶಿಥಿಲಗೊಳ್ಳುವಂತಹ ಯಾ ಸರಕಾರವನ್ನು ಕೆದಕುವ ಯಾ ಅಪರಾಧವೆಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

7. ಈ ನಿಷೇದಾಜ್ಞೆ ಆದೇಶವು ಸರಕಾರದಿಂದ ಯಾ ಸರಕಾರದ ಆದೇಶದಂತೆ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ, ಸಮಾರಂಭಗಳಿಗೆ ಅನ್ವಯಿಸುವುದಿಲ್ಲ ಮತ್ತು ಸರಕಾರಿ ನೌಕರರು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ.

8. ಈ ನಿಷೇಧಾಜ್ಞೆ ಆದೇಶವು ಕೆಳಗೆ ಸಹಿ ಮಾಡಿರುವವರ ಅಥವಾ ಉಪವಿಭಾಗದ ದಂಡಾಧಿಕಾರಿ, ತಾಲೂಕು ದಂಡಾಧಿಕಾರಿಯವರ ಪೂರ್ವಾನುಮತಿಯಂತೆ ನಡೆಯುವ ಕಾರ್ಯಕ್ರಮಗಳಿಗೆ ಹಾಗೂ ಶವ ಮೆರವಣಿಗೆ, ಮದುವೆ ಮೆರವಣಿಗೆ ಮತ್ತು ಧಾರ್ಮಿಕ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ.

Previous Post

ಕಾರ್ಕಳ ಮಿಯ್ಯರ್ ರಿನಲ್ಲಿ ನಕಲಿ ಮತದಾನ : ಕ್ರಮಕ್ಕೆ ಆಗ್ರಹ..!!

Next Post

ಹಾವಂಜೆ, ಕೀಳಂಜೆ ಪರಿಸರದಲ್ಲಿ ಸಾಕುನಾಯಿಗಳ ಮೇಲೆ ಚಿರತೆ ದಾಳಿ – ಆತಂಕದಲ್ಲಿ ಸ್ಥಳೀಯರು…!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಹಾವಂಜೆ, ಕೀಳಂಜೆ ಪರಿಸರದಲ್ಲಿ ಸಾಕುನಾಯಿಗಳ ಮೇಲೆ ಚಿರತೆ ದಾಳಿ - ಆತಂಕದಲ್ಲಿ ಸ್ಥಳೀಯರು...!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026

Recent News

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

ಕಾರ್ಕಳ: ಬಿಜೆಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಭಾರಿ ಪ್ರತಿಭಟನೆ – ಅಭಿವೃದ್ಧಿ ಕಾಮಗಾರಿಗಳ ಹಂಗಾಮಿ ಸ್ಥಗಿತಕ್ಕೆ ಆಕ್ಷೇಪ

15/03/2026
ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

ಉಡುಪಿ: ಆಯಾತಪ್ಪಿ ಬಿದ್ದ ಗಾಂಧೀಜಿ ವೇಷಧಾರಿ ವೃದ್ಧರಿಗೆ ಸಮಾಜಸೇವಕರ ನೆರವು

14/03/2026
ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

ಮಾ.15 : ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ‘ಶಿವಾಜಿ ಸಂಗಮ’ ಕಾರ್ಯಕ್ರಮ

14/03/2026
Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

Health Tips: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ 3 ಪಾನೀಯಗಳು ಸಹಕಾರಿ….!

14/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved