ಉಡುಪಿ: ಸೆಪ್ಟೆಂಬರ್ 09 : ಉಡುಪಿಯ ಮಾರುತಿ ವೀಥಿಕಾ ಸಮೀಪ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೆಪ್ಟೆಂಬರ್ 08 ನಿನ್ನೆ ರಾತ್ರಿ ವೇಳೆ ನುಗ್ಗಿದ ಕಳ್ಳರು ಅಪಾರ ವೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ಶಟರ್ ನ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ., ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
ಈ ಇನ್ನಷ್ಟೇ ಹೆಚ್ಚಿನ ಮಾಹಿತಿ ಲಭಿಸಬೇಕಾಗಿದೆ.








