Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಂಗೆ ವಿಷ ಕೊಡಿ : ಜಡ್ಜ್​ ಎದುರು ದರ್ಶನ್ ಅಳಲು..!!

Dhrishya News by Dhrishya News
09/09/2025
in ಸುದ್ದಿಗಳು
0
0
SHARES
44
VIEWS
Share on FacebookShare on Twitter

ಬೆಂಗಳೂರು: ಸೆಪ್ಟೆಂಬರ್ 09:ಸ್ವಾಮಿ ಕೊಲೆ ಕೇಸ್ ಆರೋಪಿ ನಟ ದರ್ಶನ್ ಅವರಿಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸವಲತ್ತು ಸಿಗುತ್ತಿಲ್ಲ. ಇದರಿಂದ ಅವರು ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್  ಅವರು ಜಡ್ಜ್ ಎದುರು ಬೇಡಿಕೆ ಒಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದುರೇ ಕೇಳಿದ್ದಾರೆ.

ದರ್ಶನ್ ಬೇಡಿಕೆ ಕೇಳಿ ಜಡ್ಜ್ ಒಮ್ಮೆ ಶಾಕ್ ಆದರು. ‘ಹಾಗೆಲ್ಲ ಕೇಳಬಾರದು’ ಎಂದು ಜಡ್ಜ್ ದರ್ಶನ್​ಗೆ ಕಿವಿ ಮಾತು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕಳೆದ ವರ್ಷ ಅರೆಸ್ಟ್ ಆಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್​ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು. ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾಲ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿತು.

‘ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು’ ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ಜಡ್ಜ್ಜ್ ‘ಹಾಗೆಲ್ಲಾ ನೀವು ಕೇಳುವಂತಿಲ್ಲ’ ಎಂದು ಹೇಳಿದ್ದಾರೆ.

‘ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ’ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

Previous Post

ಉಡುಪಿ:ಹೃದಯಾಘಾತದಿಂದ ಉದ್ಯಮಿ, ಕ್ರಿಕೆಟ್ ಆಟಗಾರ ಪ್ರದೀಪ್ ಅಂಬಲಪಾಡಿ ನಿಧನ..!!

Next Post

ಉಡುಪಿ :ಸೆಪ್ಟೆಂಬರ್ 12ರಂದು ಭಾರತೀಯ ಜ್ಞಾನ ಪರಂಪರೆ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ :ಸೆಪ್ಟೆಂಬರ್ 12ರಂದು ಭಾರತೀಯ ಜ್ಞಾನ ಪರಂಪರೆ ಸಮ್ಮೇಳನ..!!

ಉಡುಪಿ :ಸೆಪ್ಟೆಂಬರ್ 12ರಂದು ಭಾರತೀಯ ಜ್ಞಾನ ಪರಂಪರೆ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved