Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!

Dhrishya News by Dhrishya News
12/09/2025
in ಸುದ್ದಿಗಳು
0
ಕಾರ್ಕಳ : ಪತ್ರಿಕಾ ಭವನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ..!!
0
SHARES
21
VIEWS
Share on FacebookShare on Twitter

ಕಾರ್ಕಳ: ಸೆಪ್ಟೆಂಬರ್ 12: ಕಾರ್ಕಳ ತಾಲೂಕು ಕಚೇರಿ ಬಳಿಯ ಪತ್ರಿಕಾ ಭವನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾರ್ಕಳದಲ್ಲಿ ಶಾಶ್ವತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಪತ್ರಕರ್ತರು ಸಮಾಜದಲ್ಲಿ ಪಾರದರ್ಶಕತೆ, ಸ್ವಚ್ಛತೆ ಹಾಗೂ ಜಾಗೃತಿ ಮೂಡಿಸುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದರು. ಉಡುಪಿ ಜಿಲ್ಲೆಯ ರಜತ ಮಹೋತ್ಸವ ಸಮಿತಿಯ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ದಿನಾಂಕ ನಿಗದಿ ಗೊಳಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯ ಜನರು ದಾನಧರ್ಮ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಇತರ ಜಿಲ್ಲೆಗಳಿಗೆ ಮಾದರಿಯಾಗಿದ್ದಾರೆ. ಸರಕಾರದ ಕಾರ್ಯಕ್ರಮಗಳ ಜೊತೆಗೆ ಖಾಸಗಿ ಮಟ್ಟದಲ್ಲೂ ಸಹಕರಿಸುವ ಮನೋಭಾವವನ್ನು ಹೊಂದಿರುವುದು ಈ ಜಿಲ್ಲೆಯ ವಿಶೇಷವೆಂದರು.

ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ, ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ಬಿಪಿನ್ ಚಂದ್ರ ಪಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಸಂಘದ ವತಿಯಿಂದ ಸಚಿವೆಗೆ ಸನ್ಮಾನ ಸಲ್ಲಿಸಲಾಯಿತು.

ಕಾರ್ಯಕ್ರಮವನ್ನು ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಷರೀಫ್ ಪ್ರಸ್ತಾವಿಕ ಮಾತನಾಡಿ ದರು. 

Previous Post

ಬ್ರಹ್ಮಾವರ: ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು : ಯುವಕ ಬಾವಿಗೆ ಹಾರಿ ಆತ್ಮಹತ್ಯೆ.!!

Next Post

ಉಡುಪಿ : ವಿಟ್ಲಪಿಂಡಿ ದಿನ ಭಕ್ತರಿಗೆ ಹಂಚಲು ತಯಾರಾಗಿದೆ ಲಕ್ಷಾಂತರ ಉಂಡೆ ಚಕ್ಕುಲಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಉಡುಪಿ : ವಿಟ್ಲಪಿಂಡಿ ದಿನ ಭಕ್ತರಿಗೆ ಹಂಚಲು ತಯಾರಾಗಿದೆ ಲಕ್ಷಾಂತರ ಉಂಡೆ ಚಕ್ಕುಲಿ..!!

ಉಡುಪಿ : ವಿಟ್ಲಪಿಂಡಿ ದಿನ ಭಕ್ತರಿಗೆ ಹಂಚಲು ತಯಾರಾಗಿದೆ ಲಕ್ಷಾಂತರ ಉಂಡೆ ಚಕ್ಕುಲಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026

Recent News

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

ಉಡುಪಿಯಲ್ಲಿ ಮೇ ದಿನಾಚರಣೆ: ಕಾರ್ಮಿಕರ ಹಕ್ಕುಗಳ ಕುರಿತ ವಿಚಾರಸಂಕಿರಣ

01/05/2026
ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

ಮಾಹೆಯ 8ನೇ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಡಾ. ಶರತ್ ಕೆ. ರಾವ್  

01/05/2026
ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ..!!

01/05/2026
ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

ಮಣಿಪಾಲವನ್ನು ಶಿಕ್ಷಣಕಾಶಿಯನ್ನಾಗಿಸಿದ ಡಾ. ಟಿ.ಎಂ.ಎ. ಪೈ 128ನೇ ಜನ್ಮದಿನೋತ್ಸವದ ಸಂಭ್ರಮ

01/05/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved