ಉಡುಪಿ :ಸೆಪ್ಟೆಂಬರ್ 17:ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ವಿಶ್ವಕರ್ಮ ಜಯಂತಿ ದಿನಾಚರಣೆ ಕಾರ್ಯಕ್ರಮವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.


ಸಮಾರಂಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ದಿನಕರ ಹೇರೂರು, ವಿವಿಧ ಇಲಾಖೆಯ ಅಧಿಕಾರಿಗಳು, ವಿಶ್ವಕರ್ಮ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.








