Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಿರಿಯ ಸಂಶೋಧಕ, ಇತಿಹಾಸ ತಜ್ಞ, ಬರಹಗಾರ ಪ್ರೊ| ಡಾ| ಕೆ.ಜಿ. ವಸಂತ ಮಾಧವ ನಿಧನ..!! 

Dhrishya News by Dhrishya News
19/09/2025
in ಸುದ್ದಿಗಳು
0
0
SHARES
1
VIEWS
Share on FacebookShare on Twitter

ಸೆಪ್ಟೆಂಬರ್ 19: ಹಿರಿಯ ಸಂಶೋಧಕ, ಇತಿಹಾಸ ತಜ್ಞ, ಬರೆಹಗಾರ ಮೂಲ್ಕಿ ವಿಜಯ ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಮುಖ್ಯಸ್ಥ ಪ್ರೊ| ಡಾ| ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ – 88) ಅವರು ಬೆಂಗಳೂರಿನಲ್ಲಿರುವ ತನ್ನ ಪುತ್ರಿಯ ನಿವಾಸದಲ್ಲಿ ಸೆ. 17ರಂದು ನಿಧನ ಹೊಂದಿದರು.

ಅವರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಪ್ರೊಫೆಸರ್ ಡಾ. ಕೆ.ಜಿ. ವಸಂತ ಮಾಧವ (ಗುಜ್ಜಾಡಿ ವಸಂತ ಮಾಧವ ಕೊಡಂಚ) ಅವರು 1937ರ ಏಪ್ರಿಲ್ 9ರಂದು ಜನಿಸಿದರು.

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಮತ್ತು ‘ಕೆನರಾದ ರಾಜಕೀಯ ಇತಿಹಾಸ : ೧೫೬೫-೧೭೬೩’ ಎನ್ನುವ ವಿಷಯದ ಮೇಲೆ ಮಹಾಪ್ರಬಂಧವನ್ನು ರಚಿಸಿ ಪಿಎಚ್.ಡಿ. ಪದವಿಯನ್ನು ಪಡೆದವರು.

ಮುಲ್ಕಿ ವಿಜಯಾ ಕಾಲೇಜಿನಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ೩೨ ವರ್ಷ ಕರ್ತವ್ಯ ನಿರ್ವಹಿಸಿದ ವಸಂತ ಮಾಧವರು. ನಿವೃತ್ತಿಯ ನಂತರ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಪ್ರೊಫೆಸರ್‌ರಾಗಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸುಮಾರು ಇಪ್ಪತ್ತರಷ್ಟು ಇತಿಹಾಸ ಕೃತಿಗಳನ್ನು ಮತ್ತು ಸಾವಿರಾರು ಲೇಖನಗಳನ್ನು ಬರೆದಿದ್ದಾರೆ.

ವಸಂತ ಮಾಧವರ ಕುರಿತಾದ ಕೃತಿಯನ್ನು ಡಾ. ಎಸ್. ಪದ್ಮನಾಭ ಭಟ್ಟರು ರಚಿಸಿದ್ದು ನಾಡಿಗೆ ನಮಸ್ಕಾರ ಗ್ರಂಥಮಾಲೆಯಡಿ ಕಾಂತಾವರ ಕನ್ನಡ ಸಂಘ ಪ್ರಕಟಿಸಿದೆ. ಉಡುಪಿಯ ಗೋವಿಂದ ಪೈ ಸಂಶೋಧನಾ ಕೇಂದ್ರವರು ಅವರ ವಿದ್ವತ್ತನ್ನು ಪುರಸ್ಕರಿಸಿ ಗೌರವಿಸಿದ್ದಾರೆ. ಗೋವಾದಲ್ಲಿ ನಡೆದ ದಕ್ಷಿಣ ಭಾರತ ಇತಿಹಾಸ ಕಾಂಗ್ರೆಸ್ಸಿನ ಮೂರನೇ ವಿಶ್ವ ಸಮ್ಮೇಳನದಲ್ಲಿ ಅವರನ್ನು ಸನ್ಮಾನಿಸಲಾಗಿದೆ.

ಅವರಿಗೆ ಯುಗಪುರುಷ ಪ್ರಶಸ್ತಿ ಮತ್ತು ಕೋ. ಮ. ಕಾರಂತ ಪ್ರಶಸ್ತಿ ಲಭಿಸಿದೆ. ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ, ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತುಗಳು ಸಾಹಿತ್ಯ ಸಮ್ಮೇಳನ ಸಂದರ್ಭಗಳಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಿವೆ. ಅದೇ ರೀತಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೂಡಾ ಅವರನ್ನು ಸನ್ಮಾನಿಸಿದೆ. ಅಲ್ಲದೆ ಲಂಡನ್ನಿನ ರೋಯಲ್ ಏಷಿಯಾಸ್ಟಿಕ್ ಸೊಸೈಟಿ ೧೯೮೩ರಲ್ಲಿ ಹಾಗೂ ಕಲ್ಕತ್ತಾದ ಇತಿಹಾಸ ಅಧ್ಯಯನ ಸಂಸ್ಥೆ ೨೦೧೯ ರಲ್ಲಿ ‘ಫೆಲೋ’ ಗೌರವ ನೀಡಿದೆ.

ವಸಂತ ಮಾಧವರ ಪ್ರಮುಖ ಗ್ರಂಥಗಳು : ಆಂಗ್ಲ ಭಾಷೆಯಲ್ಲಿ

1) Western Karnataka, Its Agrarian Relations

2) Research Trends in the study of History of Coastal Karnataka

3) Karnataka and Third World

4) History of Indian Movements in India

5) Karnataka – Kerala Contacts

6) The Historical Significance of Sthanikas in the Cultural History of Karnataka

7) Religions in Coasts of Karnataka

8) Some Aspects of Indian Medical History

9) Essays on Indian Medical History

ಕನ್ನಡ ಗ್ರಂಥಗಳು

೧) ಮೂಲಿಕೆ ಇತಿಹಾಸ

೨) ಕರಾವಳಿ ಕರ್ನಾಟಕದ ಇತಿಹಾಸ ಮತ್ತು ಸಂಶೋಧನೆ

೩) ಕರಾವಳಿ ಕರ್ನಾಟಕದ ಶಾಸನಗಳ ಸಾಂಸ್ಕೃತಿಕ ಅಧ್ಯಯನ

೪) ಪ್ರಾಚೀನ ಜಾಗತಿಕ ಪರಿದೃಶ್ಯದಲ್ಲಿ ಭಾರತೀಯ ವೈದ್ಯಶಾಸ್ತ್ರ

೫) ಕರ್ನಾಟಕ ಸಾಂಸ್ಕೃತಿಕ ಚರಿತ್ರೆಯಲ್ಲಿ ಸ್ಥಾನಿಕರ ಮಹತ್ವ

೬) ಭಾರತದ ಇತಿಹಾಸ ಗ್ರಂಥಗಳ ವಿಮರ್ಶಾತ್ಮಕ ಪರಿಚಯ

೭) ಕರಾವಳಿ ಕರ್ನಾಟಕ ಸಾಂಸ್ಕೃತಿಕ ಇತಿಹಾಸದ ಆಕರಗಳು

೮) ಇತಿಹಾಸ ಯಾನ – ಸಾಂಸ್ಕೃತಿಕ ನೋಟಗಳು

೯) ಭಾರತೀಯ ವಿಜ್ಞಾನ ಇತಿಹಾಸ

Previous Post

ಜನರಲ್ಲಿ ಆರ್ಥಿಕ ಸಂಪನ್ಮೂಲ ವೃದ್ಧಿಸುವುದು ಸಹಕಾರಿ ಕ್ಷೇತ್ರದ ಮುಖ್ಯ ಉದ್ದೇಶ – ಐವನ್ ಡಿಸೋಜ..!

Next Post

ಉಡುಪಿ : ಸರಳ ವಿವಾಹಕ್ಕೆ ಜೋಡಿಗೆ 50,000 ರೂ ಪ್ರೋತ್ಸಾಹ ಧನ : ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸರಳ ವಿವಾಹಕ್ಕೆ ಜೋಡಿಗೆ 50,000 ರೂ ಪ್ರೋತ್ಸಾಹ ಧನ : ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿ: ಮಳೆ ಕಡಿಮೆ ಇರುವುದರಿಂದ ಉಡುಪಿ ಜಿಲ್ಲೆ ಶಾಲಾ ಕಾಲೇಜುಗಳಿಗೆ ಗುರುವಾರ ರಜೆ ಇರುವುದಿಲ್ಲ : ಜಿಲ್ಲಾಧಿಕಾರಿ ಮಾಹಿತಿ…!!

26/06/2024

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026

Recent News

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

ದೈವದ ಮೂರ್ತಿ ಕಳ್ಳತನ: ಸುರತ್ಕಲ್ ಪೊಲೀಸರಿಂದ ಇಬ್ಬರ ಬಂಧನ..!!

29/01/2026
ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

ನಗರದಲ್ಲಿ ಡ್ರಗ್ಸ್ ದಂಧೆಗೆ ಬ್ರೇಕ್: 4 ಕೋಟಿ ರೂ. ಮಾದಕ ವಸ್ತು ವಶ, 10 ಮಂದಿ ಸೆರೆ…!!

29/01/2026
ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

ಅಧಿವೇಶನ ಫೆಬ್ರವರಿ 3ರ ವರೆಗೆ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಒಲವು..!!

29/01/2026
ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

ಕಾರ್ಕಳದಲ್ಲಿ ಗಂಡನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ – ಗಂಭೀರ ಗಾಯಗೊಂಡ ಮಹಿಳೆ ಆಸ್ಪತ್ರೆಗೆ ದಾಖಲು…!!

29/01/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved