ಆಗುಂಬೆ :ಸೆಪ್ಟೆಂಬರ್ 21: ಉಡುಪಿ-ಹೆಬ್ರಿ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ ‘169ಎ’ಯ ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಶುಕ್ರವಾರ ಸಂಜೆ ಭೂಕುಸಿತ ಸಂಭವಿಸಿ ಸಂಚಾರಕ್ಕೆ ತೊಡಕಾಗಿತ್ತು.
ಶನಿವಾರ ಬೆಳಿಗ್ಗೆಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನದ ಹೊತ್ತಿಗೆ ಮುಕ್ತಾಯಗೊಂಡು ಹೆದ್ದಾರಿಯು ಸಂಚಾರಕ್ಕೆ ಮುಕ್ತವಾಯಿತು.
ಭೂಕುಸಿತವಾಗಿ ಚಲಿಸುತ್ತಿದ್ದ ಪಿಕ್‌ಅಪ್ ಮೇಲೆ ಮರ ಬಿದ್ದು, ಒಬ್ಬರು ಗಾಯಗೊಂಡಿದ್ದರು. ಘಟನೆಯಿಂದ ಆಗುಂಬೆ ಘಾಟಿ ಸಂಪೂರ್ಣ ಬಂದ್ ಆಗಿತ್ತು. ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು. ಅರಣ್ಯ, ರಾಷ್ಟ್ರೀಯ ಹೆದ್ದಾರಿ, ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಯಿತು.
ವಲಯ ಅರಣ್ಯಾಧಿಕಾರಿಗಳಾದ ಚಿದಾನಂದಪ್ಪ ಜಿ., ಮಂಜುಳಾ, ಆಗುಂಬೆ ಪಿಎಸ್‌ಐ ಶಿವಾನಂದಪಾಟೀಲ್, ಹೆಬ್ರಿ ಪಿ.ಎಸ್.ಐ ಮಹಾಂತೇಶ್ ಜಾಬಗೌಡ, ರಾಷ್ಟ್ರೀಯ ಹೆದ್ದಾರಿಯ ಎಂಜಿನಿಯರ್ ಶಶಿಧರ್, ಸಿಬ್ಬಂದಿ ಇದ್ದರು.








