ಉಡುಪಿ: ಸೆಪ್ಟೆಂಬರ್ 21:ನಗರದ ಜ್ಯುವೆಲ್ಲರಿ ವರ್ಕ್‌ಶಾಪ್‌ನಿಂದ ಲಕ್ಷಾಂತರ ಮೌಲ್ಯದ ಚಿನ್ನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಅಂತರರಾಜ್ಯ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ನಿಮ್‌ಗಾಂವ್ ಎಂಬಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹74 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.
ಉಡುಪಿಯ ವಾದಿರಾಜ ಮಾರ್ಗದ ಜ್ಯುವೆಲ್ಲರಿ ವರ್ಕ್‌ಶಾಪ್‌ನ ಶಟರ್ ಅನ್ನು ನಕಲಿ ಕೀ ಬಳಸಿ ತೆರೆದಿದ್ದ ಕಳ್ಳರು, ರಿಫೈನರಿ ಮೆಷಿನ್‌ನಲ್ಲಿ ಇಟ್ಟಿದ್ದ ಸುಮಾರು ₹95 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.