ಉಡುಪಿ :ಸೆಪ್ಟೆಂಬರ್ 21:ರಾಷ್ಟ್ರೀಯ ಹೆದ್ದಾರಿ 169A ಉಡುಪಿ ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಲೋಕಾರ್ಪಣೆ ಯನ್ನು ಕೇಂದ್ರ ಸರಕಾರದ ರೈಲ್ವೇ ಇಲಾಖೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಉದ್ಘಾಟಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ,ಶಾಸಕರಾದ ಶ್ರೀ ಸುನೀಲ್ ಕುಮಾರ್, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಗುರುರಾಜ್ ಗಂಟಿಹೊಳೆ, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಪಾಧ್ಯಕ್ಷರಾದ ಶ್ರೀಮತಿ ರಜನಿ ಹೆಬ್ಬಾರ್, ಮಾಜಿ ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.








