ಉಡುಪಿ:ಸೆಪ್ಟೆಂಬರ್ 23 :ಸಾರ್ವಜನಿಕ ಶ್ರೀಶಾರದೋತ್ಸವ ಸಮಿತಿ ಉಡುಪಿ ಹಾಗೂ ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ ಇದರ ವತಿಯಿಂದ ಆಯೋಜಿಸಿರುವ ದಶಮ ವರ್ಷದ ಉಡುಪಿ ದಸರಾ ಸಾರ್ವಜನಿಕ ಶ್ರೀಶಾರದೋತ್ಸವದ ಉದ್ಘಾಟನೆಯನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ನೆರವೇರಿಸಿ ಆಶೀರ್ವಚಿಸಿದರು.
ಉದ್ಘಾಟನಾ ಸಮಾರಂಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಬೈಕಾಡಿ ಸುಪ್ರಸಾದ ಶೆಟ್ಟಿ ಮೊದಲಾದ ಗಣ್ಯರು ಉಪಸ್ಥಿತರಿದ್ದರು.








