ಉಡುಪಿ: ಸೆಪ್ಟೆಂಬರ್ 24:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಜಿ.ಎಸ್.ಟಿ. ಸುಧಾರಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜನರಲ್ಲಿ ಉಂಟಾಗಿರುವ ಖರೀದಿ ಉತ್ಸಾಹ ಮತ್ತು ಉಳಿತಾಯ ಉತ್ಸವದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ಜಿಲ್ಲಾ ಕಛೇರಿಯ ಬಳಿ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗುತ್ತಾ ಪಟಾಕಿ ಸಿಡಿಸಿ ಸಂಭ್ರಮಾಚರಣೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ ಕಾರ್ಕಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಪ್ರಮುಖರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಶಿವಕುಮಾರ್ ಅಂಬಲಪಾಡಿ, ದಿನೇಶ್ ಅಮೀನ್, ಸಂಧ್ಯಾ ರಮೇಶ್, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶಶಾಂಕ್ ಶಿವತ್ತಾಯ, ನಳಿನಿ ಪ್ರದೀಪ್ ರಾವ್, ಪಿ.ದಿವಾಕರ ಶೆಟ್ಟಿ, ಮಧುಕರ ಮುದ್ರಾಡಿ, ಚಂದ್ರಶೇಖರ ಪ್ರಭು, ಗಣೇಶ್ ಕುಲಾಲ್, ಕಿಶೋರ್ ಕುಮಾರ್ ಕರಂಬಳ್ಳಿ, ಶ್ರೀವತ್ಸ ಮುಂತಾದವರು ಉಪಸ್ಥಿತರಿದ್ದರು.








