ಉಡುಪಿ: ಅಕ್ಟೋಬರ್ 03:ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಕೃಷ್ಣ ಮಠ,ಉಡುಪಿ ಪರ್ಯಾಯ ಶ್ರೀ ಪುತ್ತಿಗೆ ಮಠ,ಶ್ರೀ ಕೃಷ್ಣ ಮಠ ಹಾಗೂ ಪತಂಜಲಿ ಯೋಗ ಸಮಿತಿ ಸಹಯೋಗದಲ್ಲಿ ಅಕ್ಟೋಬರ್ 02ರಂದು ಬೆಳಿಗ್ಗೆ ಸ್ವಚ್ಛ ಭಾರತ್ ಅಭಿಯಾನಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂಧ್ರ ತೀರ್ಥ ಶ್ರೀಪಾದರು ಶುಭ ಹಾರೈಸಿ ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷರಾದ ಪ್ರಭಾಕರ ಪೂಜಾರಿಯವರು ಪರಿಸರ ಸ್ವಚ್ಛ ತೆಯ ಮಹತ್ವ ತಿಳಿಸಿದರು. ಪತಂಜಲಿ ಜಿಲ್ಲಾ ಪ್ರಭಾರಿ ಕೆ. ರಾಘವೇಂದ್ರ ಭಟ್ ಸ್ವಾಗತಿಸಿ, ಪ್ರಸ್ತಾವನೆ ಗೈದರು.ಶ್ರೀ ಮಠದ ದಿವಾನರಾದ ನಾಗರಾಜ ಆಚಾರ್ಯ, ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ಸಂಚಾಲಕರಾದ ರಮಣಾಚಾರ್ಯ, ಪತಂಜಲಿ ಯೋಗ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.








