ಉಡುಪಿ : ಅಕ್ಟೋಬರ್ 04:ಅಲೆವೂರು ಗ್ರಾಮದ ಕರ್ವಾಲು ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಅಗ್ನಿ ಅನಾಹುತದಿಂದಾಗಿ ಘಟಕದಲ್ಲಿದ್ದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಯಂತ್ರೋಪಕರಣಗಳು ಸುಟ್ಟು ಹೋಗಿವೆ.
ಘಟಕದೊಳಗಿದ್ದ ಅಪಾರ ಪ್ರಮಾಣದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.
ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆಗೆ ಸಿಬ್ಬಂದಿ ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದರು. ಇದು ಉಡುಪಿ ನಗರಸಭೆಗೆ ಸೇರಿದ ತ್ಯಾಜ್ಯ ವಿಲೇವಾರಿ ಘಟಕವಾಗಿದ್ದು, ಕಸ ಸಂಗ್ರಹಿಸಿ ಸಂಸ್ಕರಿಸುವ ಕಾರ್ಯ ನಡೆಯುತ್ತದೆ.









