ಉಡುಪಿ: ಅಕ್ಟೋಬರ್ 05:ಉಡುಪಿಯ ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆಗೆ ಒಳಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಮಹಿಳೆಯನ್ನು ಉಡುಪಿ ಮಿಷನ್ ಕಂಪೌಂಡ್ ನಿವಾಸಿ ರಿಧಾ ಶಭನಾ(27) ಎನ್ನಲಾಗಿದೆ.
ಸೈಫುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27 ವ), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37 ವ) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್ ಶುಕುರ್ (43 ವ) ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು ಇದೀಗ ಮಹಿಳಾ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.








