Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇನ್ನೂ ಪೂರ್ಣಗೊಳ್ಳದ ಸಮೀಕ್ಷೆ : ಸರ್ಕಾರಿ,ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ..!!

Dhrishya News by Dhrishya News
07/10/2025
in ಸುದ್ದಿಗಳು
0
ಇನ್ನೂ ಪೂರ್ಣಗೊಳ್ಳದ ಸಮೀಕ್ಷೆ :  ಸರ್ಕಾರಿ,ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ..!!
0
SHARES
76
VIEWS
Share on FacebookShare on Twitter

ಬೆಂಗಳೂರು: ಅಕ್ಟೋಬರ್ 07: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಇಂದು ಸಮೀಕ್ಷೆ ಮುಕ್ತಾಯಗೊಳ್ಳಬೇಕಿತ್ತು. ಆದರೇ ಸಮೀಕ್ಷೆ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಇಂದು ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರು, ಸದಸ್ಯರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದರು. ಜಾತಿಗಣತಿ ಸಮೀಕ್ಷೆ ಮುಕ್ತಾಯವಾಗದ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಿಗೆ ರಜೆಯನ್ನು ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಅಕ್ಟೋಬರ್.18ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆಯನ್ನು ನೀಡಲು ನಿರ್ಧರಿಸಲಾಗಿದೆ.

ಶಿಕ್ಷಕರನ್ನು ಸಮೀಕ್ಷೆಗೆ ಸಂಪೂರ್ಣವಾಗಿ ಬಳಸಿಕೊಳ್ಳಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ. ಹೀಗಾಗಿ ಶಾಲೆಗಳಿಗೆ ನೀಡಲಾಗಿದ್ದಂತ ದಸರಾ ರಜೆಯನ್ನು ಅಕ್ಟೋಬರ್.18ರವರೆಗೆ ದಸರಾ ರಜೆಯನ್ನು ವಿಸ್ತರಣೆ ಮಾಡಲು ಸಿಎಂ ಸಿದ್ಧರಾಮಯ್ಯ ನಿರ್ಧರಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ಕೊಪ್ಪಳ ಜಿಲ್ಲೆಯಲ್ಲಿ ಜಾತಿಗಣತಿ ಸಮೀಕ್ಷೆ ಶೇ.90ರಷ್ಟು ಆಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಶೇ.68, 69ರಷ್ಟು ಆಗಿದೆ. ಇಡೀ ರಾಜ್ಯದಲ್ಲಿ ನಮ್ಮ ನಿರೀಕ್ಷೆ ಏನಿತ್ತೋ ಅದು ಸಾಧ್ಯವಾಗಿಲ್ಲ. ಇಂದು ಸಂಜೆ ಜಾತಿಗಣತಿ ಸಮೀಕ್ಷೆ ಎಷ್ಟು ಆಗಲಿದೆ ಎಂಬುದು ತಿಳಿಯಲಿದೆ. ನನಗೆ ಬಂದಿರುವಂತ ಮಾಹಿತಿಯಂತೆ ಎಲ್ಲಾ ಜಿಲ್ಲೆಯಲ್ಲಿ ಸಂಪೂರ್ಣ ಸಮೀಕ್ಷೆಯಾಗಿಲ್ಲ ಎಂದರು.

ನಿನ್ನೆ ಶಿಕ್ಷಣ ಇಲಾಖೆಯಿಂದ ಒಂದು ಆದೇಶ ಮಾಡಲಾಗಿದೆ. ಹಿಂದುಳಿದ ಆಯೋಗದ ಜೊತೆಗೆ ಚರ್ಚಿಸಿ ಮಾಡಿರುವಂತ ಆದೇಶವಾಗಿದೆ. ಆ ಬಳಿಕ ಇಂದು ಚರ್ಚಿಸಿ ಎಲ್ಲಾ ಶಿಕ್ಷಕರನ್ನು ಸಮೀಕ್ಷೆಗೆ ತೊಡಗಿಸಿಕೊಳ್ಳಲು ನಿರ್ಧರಿಸಲಾಗಿದೆ. ಒಂದು ದಿನಕ್ಕೆ ಕನಿಷ್ಠ 15 ಮನೆಗಳನ್ನು ಮಾಡಲು ಹೇಳಲಾಗಿತ್ತು. ಆದರೇ ಅದು ಸಾಧ್ಯವಾಗಿಲ್ಲ. ರಜೆ ವಿಸ್ತರಣೆ ಮಾಡಬೇಕು ಎಂಬುದಾಗಿ ಶಿಕ್ಷಕರ ಸಂಘವು ಮನವಿ ಮಾಡಿದೆ. ಅದುದ್ದರಿಂದ ನಾಳೆಯಿಂದ 10 ದಿನಗಳ ಕಾಲ ದಸರಾ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಈ 12 ವರ್ಕಿಂಗ್ ಡೇಸ್ ನಲ್ಲಿ ಸಂಪೂರ್ಣ ಸಮೀಕ್ಷೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಯಾರು ಸರ್ವೆ ಕಾರ್ಯದಲ್ಲಿ ತೊಡಗಿಸಿಕೊಳ್ಳೋದಿಲ್ಲ. ಸಮೀಕ್ಷೆ ಮಾಡಲು ಒಪ್ಪೋದಿಲ್ಲ ಅವರ ವಿರುದ್ಧ ರಾಜ್ಯ ಸರ್ಕಾರ ಶಿಸ್ತಿನ ಕ್ರಮ ಕೈಗೊಳ್ಳಲಿದೆ. ಅಕ್ಟೋಬರ್.19ಕ್ಕೆ ಮೊದಲು ರಾಜ್ಯದಲ್ಲಿ ಸಂಪೂರ್ಣವಾಗಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ಮುಕ್ತಾಯಗೊಳಿಸಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದರು.

ಜಾತಿಗಣತಿ ಸಮೀಕ್ಷೆಯ ಸಂದರ್ಭದಲ್ಲಿ ಮೂವರು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅವರೆಲ್ಲರಿಗೂ 20 ಲಕ್ಷ ಪರಿಹಾರವನ್ನು ಸರ್ಕಾರದಿಂದ ನೀಡಲು ಸರ್ಕಾರ ನಿರ್ಧರಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಇದೇ ಸಂದರ್ಭದಲ್ಲಿ ಘೋಷಿಸಿದರು.

Previous Post

ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು: ಪ್ರಕರಣ ದಾಖಲು..!!

Next Post

ಕಾರ್ಕಳ :ತೆಳ್ಳಾರು ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ಚಂಡಿಕಾ ಹೋಮ ಸಂಪನ್ನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post
ಕಾರ್ಕಳ :ತೆಳ್ಳಾರು ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ಚಂಡಿಕಾ ಹೋಮ ಸಂಪನ್ನ..!!

ಕಾರ್ಕಳ :ತೆಳ್ಳಾರು ದೇವಕಿ ಕೃಷ್ಣ ರವಳನಾಥ ದೇವಸ್ಥಾನದಲ್ಲಿ ಚಂಡಿಕಾ ಹೋಮ ಸಂಪನ್ನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

ಬ್ರಹ್ಮಾವರ:ಅಯೋದ್ಯೆ ರಾಮ ಮಂದಿರ ಹುಂಡಿ ಕಳವು ವಿಷಯದಲ್ಲಿ ವಿಶ್ವಕರ್ಮ ಸಮಾಜಕ್ಕೆ ಜಾಲತಾಣದಲ್ಲಿ ಅವಹೇಳನ ಉಡುಪಿ ಎಸ್ ಪಿಗೆ ಮನವಿ…!

31/07/2026
‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹11 ಲಕ್ಷ ವಂಚನೆ; ಪ್ರಕರಣ ದಾಖಲು

31/07/2026
ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

ಉಡುಪಿ ಜಿಲ್ಲಾ ಬಿಜೆಪಿಯ ನೂತನ ಕಛೇರಿಯ ಕಟ್ಟಡ ಕಾಮಗಾರಿ ವೀಕ್ಷಿಸಿದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್..!

31/07/2026
ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಕನ್ನಡ ಚಿತ್ರನಟ ರಾಜೇಶ್ ನಟರಂಗ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ

31/07/2026

Recent News